ಸಂಗ್ರಹ ಚಿತ್ರ 
ವಿದೇಶ

ಕಾಬೂಲ್ ನಗರದ ಮೇಲೆ ರಾಕೆಟ್ ದಾಳಿ: ದಾಳಿಯಲ್ಲಿ ಮಗು ಸಾವು, ಹಲವರಿಗೆ ಗಾಯ - ಅಫ್ಘಾನ್ ಪೊಲೀಸ್

ಅಫ್ಘಾನಿಸ್ತಾನದ ಕಾಬೂಲ್ ನ ಜನವಸತಿ ಪ್ರದೇಶದ ಮೇಲೆ ರಾಕೆಟ್ ದಾಳಿ ನಡೆದಿದ್ದು ದಾಳಿಯಲ್ಲಿ ಮಗು ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಪೊಲೀಸರು ತಿಳಿಸಿದ್ದಾರೆ. 

ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ನ ಜನವಸತಿ ಪ್ರದೇಶದ ಮೇಲೆ ರಾಕೆಟ್ ದಾಳಿ ನಡೆದಿದ್ದು ದಾಳಿಯಲ್ಲಿ ಮಗು ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಪೊಲೀಸರು ತಿಳಿಸಿದ್ದಾರೆ. 

ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ನಂತರ ಅಮೆರಿಕಾ ಸೇರಿದಂತೆ ಹಲವು ದೇಶಗಳು ತಮ್ಮ ಪ್ರಜೆಗಳನ್ನು ಸ್ಥಳಾಂತರಿಸಿದ್ದವು. ಇನ್ನು ಅಮೆರಿಕಾದಿಂದ ಸ್ಥಳಾಂತರ ಪ್ರಕ್ರಿಯೆ ನಡೆಯುತ್ತಿರುವಾಗಲೇ ಕಾಬೂಲ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುವ್ಯ ದಿಕ್ಕಿನಲ್ಲಿ ರಾಕೆಟ್ ದಾಳಿ ನಡೆದಿದ್ದು ಮಗುವೊಂದು ಸಾವನ್ನಪ್ಪಿದೆ ಎಂದು ಅಫ್ಘಾನ್ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ

ಇನ್ನು ಇತ್ತೀಚೆಗಷ್ಟೇ ಐಸಿಸ್-ಕೆ ಉಗ್ರ ಸಂಘಟನೆ ಕಾಬೂಲ್ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿತ್ತು. ಪರಿಣಾಮ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ರಾಕೆಟ್ ದಾಳಿ ನಡೆದಿದೆ.

ಕಾಬೂಲ್ ನಲ್ಲಿ ಮತ್ತೊಂದು ಭಯೋತ್ಪಾದಕ ದಾಳಿ ನಡೆಯುವ ಅಪಾಯವಿದೆ ಎಂದು ಅಮೆರಿಕಾ ಎಚ್ಚರಿಕೆ ನೀಡಿದ ಬೆನ್ನಲ್ಲೇ ರಾಕೆಟ್ ದಾಳಿ ನಡೆದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT