ದಕ್ಷಿಣ ಆಫ್ರಿಕಾದ ಆರೋಗ್ಯ ಕೇಂದ್ರವೊಂದರಲ್ಲಿ ಕಾರ್ಯಕರ್ತ ಕೋವಿಡ್ ಪರೀಕ್ಷೆಗೆ ಸಜ್ಜಾಗುತ್ತಿರುವುದು 
ವಿದೇಶ

ದಕ್ಷಿಣ ಆಫ್ರಿಕಾದಲ್ಲಿ ಆತಂಕ ಸೃಷ್ಟಿಸಿರುವ 'ಓಮಿಕ್ರಾನ್': ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕಾರಿಗಳ ತಂಡ ನಿಯೋಜನೆ

ಭಾರತದ ಕರ್ನಾಟಕಕ್ಕೆ ಅದರಲ್ಲೂ ರಾಜಧಾನಿ ಬೆಂಗಳೂರಿಗೆ ಮೊದಲು ಕಾಲಿಟ್ಟಿರುವ ಓಮಿಕ್ರಾನ್ (Omicron) ರೂಪಾಂತರಿ ಕೊರೋನಾ ವೈರಸ್ ಮೊದಲು ಪತ್ತೆಯಾಗಿರುವುದು ದಕ್ಷಿಣ ಆಫ್ರಿಕಾದ ಗೌಟೆಂಗ್ ಪ್ರಾಂತ್ಯ (Gauteng province)ದಲ್ಲಿ.

ಜೊಹಾನ್ಸ್ ಬರ್ಗ್ (JOHANNESBURG): ಭಾರತದ ಕರ್ನಾಟಕಕ್ಕೆ ಅದರಲ್ಲೂ ರಾಜಧಾನಿ ಬೆಂಗಳೂರಿಗೆ ಮೊದಲು ಕಾಲಿಟ್ಟಿರುವ ಓಮಿಕ್ರಾನ್ (Omicron) ರೂಪಾಂತರಿ ಕೊರೋನಾ ವೈರಸ್ ಮೊದಲು ಪತ್ತೆಯಾಗಿರುವುದು ದಕ್ಷಿಣ ಆಫ್ರಿಕಾದ ಗೌಟೆಂಗ್ ಪ್ರಾಂತ್ಯ (Gauteng province)ದಲ್ಲಿ. ಇಂದು ಕನಿಷ್ಠವೆಂದರೂ 24 ದೇಶಗಳಲ್ಲಿ ಕಾಣಿಸಿಕೊಂಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಅಧಿಕಾರಿಗಳು ಹೇಳಿದ್ದು ಜನತೆಯಲ್ಲಿ ಆತಂಕ ಸೃಷ್ಟಿಸಿದೆ.

ಈ ಹೊತ್ತಿನಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಮತ್ತು ಸೋಂಕು ಪತ್ತೆಯಾದವರ ಪ್ರಾಥಮಿಕ, ದ್ವಿತೀಯ ಸಂಪರ್ಕಕ್ಕೆ ಯಾರೆಲ್ಲಾ ಬಂದಿದ್ದಾರೆ ಎಂದು ತಿಳಿಯಲು ದೇಶಗಳು ಮುಂದಾಗಿವೆ. ಓಮಿಕ್ರಾನ್ ವೈರಸ್ ಇತ್ತೀಚೆಗೆ ದಕ್ಷಿಣ ಆಫ್ರಿಕಾದಲ್ಲಿ ದಿನಂಪ್ರತಿ 11 ಸಾವಿರಕ್ಕೂ ಮಂದಿಯಲ್ಲಿ ಕಾಣಿಸಿಕೊಳ್ಳುತ್ತಿದೆ. ಅಂದರೆ ಶರವೇಗದಲ್ಲಿ ಈ ರೂಪಾಂತರಿ ಕೊರೋನಾ ಹಬ್ಬುತ್ತಿದೆ. ಈ ಹಿಂದೆ ನವೆಂಬರ್ ತಿಂಗಳ ಮಧ್ಯಭಾಗದಲ್ಲಿ ಕೊರೋನಾ ಪ್ರತಿದಿನ ದೇಶಗಳಲ್ಲಿ ಸರಾಸರಿ 200ರಿಂದ 300ರಷ್ಟು ಪತ್ತೆಯಾಗುತ್ತಿದ್ದರೆ ಈಗ ಸೋಂಕಿನ ಹರಡುವಿಕೆ ಪ್ರಮಾಣ ಹೆಚ್ಚಿದೆ. 

ಸೋಂಕನ್ನು ಪತ್ತೆಹಚ್ಚಿ ಹರಡುವಿಕೆಯನ್ನು ತಡೆಯಲು ಕಣ್ಗಾವಲು ಮತ್ತು ಸೋಂಕಿತರು ಯಾರ ಸಂಪರ್ಕಕ್ಕೆ ಹೋಗುತ್ತಾರೆ ಎಂದು ಪತ್ತೆಹಚ್ಚಲು ನಾವು ಗೌಟೆಂಗ್ ಪ್ರಾಂತ್ಯದಲ್ಲಿ ತಂಡವನ್ನು ನಿಯೋಜಿಸುತ್ತಿದ್ದೇವೆ ಎಂದು ಆಫ್ರಿಕಾದ WHO ಪ್ರಾದೇಶಿಕ ತುರ್ತು ನಿರ್ದೇಶಕ ಡಾ ಸಲಾಮ್ ಗುಯೆ ತಿಳಿಸಿದ್ದಾರೆ. ತಂಡವು ಈಗಾಗಲೇ ದಕ್ಷಿಣ ಆಫ್ರಿಕಾದಲ್ಲಿ ಜೀನೋಮಿಕ್ ಸೀಕ್ವೆನ್ಸಿಂಗ್ ಕುರಿತು ಕೆಲಸ ಮಾಡುತ್ತಿದೆ. ದಕ್ಷಿಣ ಆಫ್ರಿಕಾದ ಆರ್ಥಿಕ ಕೇಂದ್ರವಾಗಿರುವ ಗೌಟೆಂಗ್ ಪ್ರಾಂತ್ಯದಲ್ಲಿ ಕಳೆದ ವಾರದಲ್ಲಿ ಸುಮಾರು ಶೇಕಡಾ 80ರಷ್ಟು ಮಂದಿ ಸೋಂಕಿಗೆ ಒಳಗಾಗಿದ್ದಾರೆ. 

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕಮ್ಯುನಿಕಬಲ್ ಡಿಸೀಸ್ (NICD), ಸುಮಾರು ಶೇಕಡಾ 75ರಷ್ಟು ಕೋವಿಡ್ ಸೋಂಕಿನ ಮಾದರಿಗಳನ್ನು ಪರೀಕ್ಷೆಗೊಳಪಡಿಸಿದಾಗ ಓಮಿಕ್ರಾನ್ ರೂಪಾಂತರಿ ವರದಿಯಾಗಿದೆ ಎಂದು ಹೇಳುತ್ತದೆ. ನವೆಂಬರ್ ತಿಂಗಳಿನಲ್ಲಿ, ನಾವು 249 ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆ ಮಾಡಿದ್ದೆವು. ಅವುಗಳಲ್ಲಿ 183 ಅನ್ನು ಓಮಿಕ್ರಾನ್ ಎಂದು ಪರಿಗಣಿಸಲಾಗಿದೆ ಎಂದು NICD ಕ್ಲಿನಿಕಲ್ ಮೈಕ್ರೋಬಯಾಲಜಿಸ್ಟ್ ಪ್ರೊಫೆಸರ್ ಆನ್ ವಾನ್ ಗಾಟ್ಬರ್ಗ್ ಹೇಳಿದ್ದಾರೆ. 

WHOನ ಆಫ್ರಿಕಾದ ನಿರ್ದೇಶಕ ಡಾ. ಮತ್ಶಿಡಿಸೊ ಮೊಯೆಟಿ, ಆಫ್ರಿಕಾದಾದ್ಯಂತ ವ್ಯಾಪಿಸುತ್ತಿರುವ ಪ್ರಕರಣಗಳ ಉಲ್ಬಣವನ್ನು ನಿಲ್ಲಿಸಬೇಕು, ಆಗ ಮಾತ್ರ ಓಮಿಕ್ರಾನ್ ನಿಯಂತ್ರಣಕ್ಕೆ ಬರಬಹುದು ಎನ್ನುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT