ಕಳವಾಗಿದ್ದ ವಿಗ್ರಹ 
ವಿದೇಶ

ಉತ್ತರಪ್ರದೇಶದ ಹಳ್ಳಿಯಿಂದ ಕಳವಾಗಿದ್ದ ದೇವರ ವಿಗ್ರಹ ಲಂಡನ್ ನಲ್ಲಿ ಪತ್ತೆ: ಭಾರತ ಹೈಕಮಿಷನ್ ಮಾಹಿತಿ

ಇಂಗ್ಲೆಂಡಿನ ಹಳ್ಳಿಯೊಂದರಲ್ಲಿ ವಾಸವಿದ್ದ ದಂಪತಿಗಳ ಬಳಿ ಈ ವಿಗ್ರಹ ಇತ್ತು. ಪತಿಯ ಮರಣಾನಂತರ ಆತನ ಬಳಿಯಿದ್ದ ಈ ವಿಗ್ರಹವನ್ನು ಪತ್ನಿ ಹರಾಜಿಗೆ ಇಟ್ಟಿದ್ದರು. 

ಲಂಡನ್: 40 ವರ್ಷಗಳ ಹಿಂದೆ ಉತ್ತರಪ್ರದೇಶದ ಹಳ್ಳಿಯೊಂದರಿಂದ ಕಳವಾಗಿದ್ದ ದೇವರ ವಿಗ್ರಹ ಲಂಡನ್ ನಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಅಲ್ಲಿನ ಭಾರತೀಯ ಹೈಕಮಿಷನ್ ಮಾಹಿತಿ ನೀಡಿದೆ. 

ಭಾರತೀಯ ಸನಾತನ ಧರ್ಮದಲ್ಲಿ ಸ್ತ್ರೀ ಶಕ್ತಿಯ ಸಂಕೇತವಾದ ಯೋಗಿನಿ ವಿಗ್ರಹ 40 ವರ್ಷಗಳ ಹಿಂದೆ ಕಳವಾಗಿತ್ತು. ಈ ವಿಗ್ರಹ ಲಂಡನ್ ನಲ್ಲಿ ಪತ್ತೆಯಾಗಿದ್ದು, ಅಲ್ಲಿನ ಅಧಿಕಾರಿಗಳು ಅದನ್ನು ಭಾರತಕ್ಕೆ ಮರಳಿಸಲಿದ್ದಾರೆ.

ಇಂಗ್ಲೆಂಡಿನ ಹಳ್ಳಿಯೊಂದರಲ್ಲಿ ವಾಸವಿದ್ದ ವೃದ್ಧ ದಂಪತಿಗಳ ಬಳಿ ಈ ವಿಗ್ರಹ ಪತ್ತೆಯಾಗಿದೆ. ವೃದ್ಧ ಪತಿಯ ಮರಣಾನಂತರ ಆತನ ಬಳಿಯಿದ್ದ ಈ ವಿಗ್ರಹವನ್ನು ಪತ್ನಿ ಹರಾಜಿಗೆ ಇಟ್ಟಿದ್ದರು. 

ಆ ಸಮಯದಲ್ಲಿ ಭಾರತೀಯ ಸಂಸ್ಕೃತಿಯ ಪರಿಚಯವಿದ್ದ ಲಾಯರ್ ಓರ್ವರಿಗೆ ಆಡು ಮುಖದ ವಿಗ್ರಹದ ಕುರಿತು ಕುತೂಹಲ ಉಂಟಾಗಿ ಅದರ ಬಗ್ಗೆ ತಿಳಿದುಕೊಳ್ಳಲು ಮುಂದಾದಾಗ ಅದು ಭಾರತದಲ್ಲಿ ಕಳವಾಗಿದ್ದ ವಿಚಾರ ಬೆಳಕಿಗೆ ಬಂದಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT