ವಿದೇಶ

ಕೋವಿಡ್ ರೂಪಾಂತರಿ ಓಮಿಕ್ರಾನ್ ನಿಂದ ಸಾವು, ಆಸ್ಪತ್ರೆ ದಾಖಲಾತಿ ಹೆಚ್ಚಳ ಸಾಧ್ಯತೆ: ವಿಶ್ವ ಆರೋಗ್ಯ ಸಂಸ್ಥೆ

Lingaraj Badiger

ಜಿನೆವಾ: ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ನಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಮತ್ತು ಸಾವುನೋವುಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿರುವುದಾಗಿ ಸ್ಪುಟ್ನಿಕ್ ವರದಿ ಮಾಡಿದೆ.

"ಜಾಗತಿಕವಾಗಿ ಹೊರ ರೂಪಾಂತರಿ ವೈರಸ್ ಗೆ ಸಂಬಂಧಿಸಿದ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಮತ್ತು ಸಾವುಗಳು ಸಹ ಹೆಚ್ಚು ವರದಿಯಾಗುವ ಸಾಧ್ಯತೆ ಇದೆ" ಎಂದು ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಓಮಿಕ್ರಾನ್ ಸೋಂಕಿತರ ಕ್ಲಿನಿಕಲ್ ಚಿತ್ರಣವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಹೆಚ್ಚಿನ ಮಾಹಿತಿಯ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ ಮತ್ತು  ಡಬ್ಲ್ಯುಎಚ್‌ಒ COVID-19 ಕ್ಲಿನಿಕಲ್ ಡೇಟಾ ಪ್ಲಾಟ್‌ಫಾರ್ಮ್ ಮೂಲಕ ಆಸ್ಪತ್ರೆಗೆ ದಾಖಲಾದ ಓಮಿಕ್ರಾನ್ ರೋಗಿಗಳ ಡೇಟಾವನ್ನು ಸಂಗ್ರಹಿಸಲು ಮತ್ತು ಹಂಚಿಕೊಳ್ಳಲು ಎಲ್ಲಾ ದೇಶಗಳಿಗೆ ಪ್ರೋತ್ಸಾಹಿಸುತ್ತಿದೆ ಎಂದು ಸ್ಪುಟ್ನಿಕ್ ವರದಿ ಮಾಡಿದೆ.

ಓಮಿಕ್ರಾನ್ ಕೊರೋನಾ ವೈರಸ್ ರೂಪಾಂತರಿ ಡೆಲ್ಟಾಗಿಂತ ಹೆಚ್ಚು ಪ್ರಬಲವಾಗಿದ್ದು, ತೀವ್ರವಾಗಿ ಹರಡುತ್ತಿದೆ ಹಾಗೂ ಲಸಿಕೆ ಕೂಡ ಇದರ ಮೇಲೆ ಪರಿಣಾಮ ಬೀರುವಲ್ಲಿ ಅಷ್ಟೊಂದು ಯಶಸ್ವಿಯಾಗಿಲ್ಲ ಎಂಬ ಮಾಹಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಹೆಚ್ಚಿನ ಸಂಖ್ಯೆಯ ಓಮಿಕ್ರಾನ್ ರೂಪಾಂತರಗಳು ಪತ್ತೆಯಾದ ದಕ್ಷಿಣ ಆಫ್ರಿಕಾದಲ್ಲಿ ಪ್ರಯಾಣ ನಿಷೇಧವನ್ನು ಹೇರಲು ಕಾರಣವಾಗಿದೆ ಮತ್ತು ಓಮಿಕ್ರಾನ್ ಹರಡುವಿಕೆಯನ್ನು ನಿಧಾನಗೊಳಿಸಲು ದೇಶೀಯ ನಿರ್ಬಂಧಗಳನ್ನು ಮರುಪರಿಚಯಿಸಲು ಪ್ರಪಂಚದಾದ್ಯಂತದ ಹಲವು ದೇಶಗಳನ್ನು ಮುಂದಾಗಿವೆ.

SCROLL FOR NEXT