ಸಂಗ್ರಹ ಚಿತ್ರ 
ವಿದೇಶ

ಜಲಿಯನ್ ವಾಲಾಭಾಗ್ ಹತ್ಯಾಕಾಂಡಕ್ಕೆ ಪ್ರತಿಕಾರ: ಲಂಡನ್ ರಾಣಿ ಹತ್ಯೆಗೆ ಸಂಚು; ಆರೋಪಿ ಬಂಧನ

ಬ್ರಿಟನ್ ರಾಣಿ ಕ್ವೀನ್ ಎಲಿಜಬೇತ್ ಹತ್ಯೆಗೆ ಯತ್ನಿಸಿದ 19 ವರ್ಷದ ಯುವಕನನ್ನ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನ ವಿಚಾರಣೆ ನಡೆಸಿದ ಪೊಲೀಸರು ಮಹತ್ವದ ಮಾಹಿತಿಯನ್ನ ಕಲೆಹಾಕಿದ್ದಾರೆ. ಆರೋಪಿಯೂ ಭಾರತ ಮೂಲದವನಾಗಿದ್ದು, ಜಶ್ವಂತ್ ಸಿಂಗ್ ಛಾಯಲ್ ಎಂದು ತಿಳಿದುಬಂದಿದೆ.

ಲಂಡನ್: ಬ್ರಿಟನ್ ರಾಣಿ ಕ್ವೀನ್ ಎಲಿಜಬೇತ್ ಹತ್ಯೆಗೆ ಯತ್ನಿಸಿದ 19 ವರ್ಷದ ಯುವಕನನ್ನ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನ ವಿಚಾರಣೆ ನಡೆಸಿದ ಪೊಲೀಸರು ಮಹತ್ವದ ಮಾಹಿತಿಯನ್ನ ಕಲೆಹಾಕಿದ್ದಾರೆ. ಆರೋಪಿಯೂ ಭಾರತ ಮೂಲದವನಾಗಿದ್ದು, ಜಶ್ವಂತ್ ಸಿಂಗ್ ಛಾಯಲ್ ಎಂದು ತಿಳಿದುಬಂದಿದೆ.

ವಿಂಡ್ಸರ್ ಕ್ಯಾಸಲ್ ನಲ್ಲಿ ಕ್ರಿಸ್ಮಸ್ ಆಚರಣೆ ಹಿನ್ನೆಲೆ ರಾಣಿ ಎಲಿಜಬೇತ್ ಆಗಮಿಸಿದ್ದರು. ಜ್ಸಸ್ವಂತ್ ಸಿಂಗ್  ಕೈಯಲ್ಲಿ ಬಾಣ ಬಿಲ್ಲುಬಿನಂಥ ಆಯುಧದೊಂದಿಗೆ ರಾಣಿ ನಿವಾಸಕ್ಕೆ ಹೋಗಲು ಪ್ರಯತ್ನಿಸುತ್ತಿದ್ದಾಗ ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ.

ಎಲಿಜಬೆತ್ ರಾಣಿಯನ್ನ ಕೊಲ್ಲಲು ಕಾರಣ ತಿಳಿಸಿದ ಆರೋಪಿ:
1919ರಲ್ಲಿ ಭಾರತದ ಜಲಿಯನ್ ವಾಲಾಭಾಗ್ ನಲ್ಲಿ ನಡೆದ ಹತ್ಯಾಕಾಂಡದ ಪ್ರತಿಕಾರವಾಗಿ ಎಲಿಜಬೆತ್ ರಾಣಿಯನ್ನ ಕೊಲ್ಲಲು ಮುಂದಾಗಿದ್ದಾನೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮುಖಕ್ಕೆ ಮುಸುಕು ಧರಿಸಿ ವೀಡಿಯೋ ಒಂದನ್ನು ಮಾಡಿ  ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಎನ್ನಲಾಗಿದೆ. ಈತನ ಮಾನಸಿಕ ಸ್ಥಿತಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ಮಾನಸಿಕ ಆಸ್ಪತ್ರೆಯಲ್ಲಿ ಇರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?