ವಿದೇಶ

ಅಮೆರಿಕಾದಲ್ಲಿ ಕೊರೊನಾ ರಣಕೇಕೆ: ಒಂದೇ ದಿನ ದಾಖಲೆಯ 5 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆ

Harshavardhan M

ವಾಷಿಂಗ್ಟನ್‌: ಜಗತ್ತಿನಲ್ಲೇ ಕೊರೊನಾ ಸಾಂಕ್ರಾಮಿಕದಿಂದಾಗಿ ಹಾನಿಗೊಳಗಾದ ದೇಶಗಳಲ್ಲಿ ಅಮೆರಿಕಾ ಮುಂಚೂಣಿಯಲ್ಲಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 5,12,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 5.4 ಕೋಟಿ ತಲುಪಿದೆ.

ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾನಿಲಯ ನೀಡಿದ ಅಂಕಿ ಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,762 ಅಮೆರಿಕನ್ನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. 

ಬೂಸ್ಟರ್ ಡೋಸ್‌ ನಿಂದಲೂ ಜನರು ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಈ ವರ್ಷದ ಜನವರಿ 8 ರಂದು ಒಂದೇ ದಿನ 2,94,015 ಪ್ರಕರಣಗಳು ಕಂಡುಬಂದಿದ್ದವು. ಆ ದಾಖಲೆಯನ್ನು ನೂತನ ಏಕದಿನ ಪ್ರಕರನಗಳ ಸಂಖ್ಯೆ ಅಳಿಸಿಹಾಕಿರುವುದು ಆತಂಕಕ್ಕೆ ಕಾರಣವಾಗಿದೆ.

ಒಮಿಕ್ರಾನ್ ರೂಪಾಂತರಿ ದೇಶದ ಪರಿಸ್ಥಿತಿ ಹದಗೆಡುತ್ತಿರುವುದಕ್ಕೆ ಕಾರಣ ಎಂದು ಪರಿಣತರು ಅಭಿಪ್ರಾಯಪಟ್ಟಿದ್ದಾರೆ. ಅಮೆರಿಕಾ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಶನ್ (ಸಿಡಿಸಿ) ಪ್ರಕಾರ, ದೇಶದಲ್ಲಿ ಒಮಿಕ್ರಾನ್ ಶೇ 58.6ರಷ್ಟಿದೆ ಎಂದು ಅಂದಾಜಿಸಲಾಗಿದೆ. 

SCROLL FOR NEXT