ಸಂಗ್ರಹ ಚಿತ್ರ 
ವಿದೇಶ

96 ದೇಶಗಳಲ್ಲಿ ಕೋವಿಡ್ ಡೆಲ್ಟಾ ರೂಪಾಂತರಿ ಪತ್ತೆ: ವಿಶ್ವ ಆರೋಗ್ಯ ಸಂಸ್ಥೆ

ಭಾರತದಲ್ಲಿ 2ನೇ ಅಲೆಯ ಆರ್ಭಟಕ್ಕೆ ಕಾರಣವಾಗಿದ್ದ ಕೊರೋನಾ ವೈರಸ್ ಡೆಲ್ಟಾ ರೂಪಾಂತರಿ ಆರ್ಭಟ ಇದೀಗ 96 ದೇಶಗಳಿಗೆ ವ್ಯಾಪಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಜಿನೀವಾ: ಭಾರತದಲ್ಲಿ 2ನೇ ಅಲೆಯ ಆರ್ಭಟಕ್ಕೆ ಕಾರಣವಾಗಿದ್ದ ಕೊರೋನಾ ವೈರಸ್ ಡೆಲ್ಟಾ ರೂಪಾಂತರಿ ಆರ್ಭಟ ಇದೀಗ 96 ದೇಶಗಳಿಗೆ ವ್ಯಾಪಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಜುಲೈ 1 ರಂದು ಬಿಡುಗಡೆಯಾದ ಕೋವಿಡ್-19 ವೀಕ್ಲಿ ಎಪಿಡೆಮಿಯೋಲಾಜಿಕಲ್ ಅಪ್‌ಡೇಟ್‌ನಲ್ಲಿ ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದ್ದು, ಡೆಲ್ಟಾ ರೂಪಾಂತರಿ ಇದೀಗ ಜಗತ್ತಿನ 93 ದೇಶಗಳಿಗೆ ವ್ಯಾಪಿಸಿದ್ದು, ಕಳೆದೊಂದು ವಾರದ ಅವಧಿಯಲ್ಲಿ ಮತ್ತೆ 11 ದೇಶಗಳಿಗೆ ರೂಪಾಂತರಿ ಸೋಂಕು  ವ್ಯಾಪಿಸಿದೆ. 

ಡೆಲ್ಟಾ ರೂಪಾಂತರವನ್ನು "ಡಬಲ್ ರೂಪಾಂತರಿತ" ಎಂದೂ ಕರೆಯಲಾಗುತ್ತದೆ, ಏಕೆಂದರೆ ಇದು ಎರಡು ರೂಪಾಂತರಗಳನ್ನು ಹೊಂದಿದ್ದು, ಇದು ಆಲ್ಫಾ ರೂಪಾಂತರಕ್ಕಿಂತ ಶೇಕಡಾ 55 ರಷ್ಟು ಹೆಚ್ಚು ವೇಗವಾಗಿ ಹರಡಬಲ್ಲದು (ಆರಂಭದಲ್ಲಿ ಯುನೈಟೆಡ್ ಕಿಂಗ್‌ಡಂನಲ್ಲಿ ಪತ್ತೆಯಾಗಿತ್ತು) ಮತ್ತು ಇದು ಜಾಗತಿಕವಾಗಿ  ಕರೋನವೈರಸ್‌ನ ಪ್ರಬಲ ಮತ್ತು ಕಳವಳಕಾರಿ ರೂಪಾಂತರವಾಗಿದೆ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ವಿಶ್ವ ಆರೋಗ್ಯ ಸಂಸ್ಥೆಯ ದತ್ತಾಂಶಗಳ ಪ್ರಕಾರ ಪ್ರಸ್ತುತ ಈ ರೂಪಾಂತರಿ ಸೋಂಕು ಟ್ಯುನೀಶಿಯಾ, ಮೊಜಾಂಬಿಕ್, ಉಗಾಂಡಾ, ನೈಜೀರಿಯಾ ಮತ್ತು ಮಲಾವಿ ಸೇರಿದೆತಂ 11 ಆಫ್ರಿಕಾ ದೇಶಗಳಲ್ಲಿ ವರದಿಯಾಗಿದೆ. ಅಲ್ಲದೇ ಇದೇ ವೈರಸ್ ಕಾರಣದಿಂದಾಗಿ ಆಫ್ರಿಕಾದಲ್ಲಿ ದಿನಕಳೆದಂತೆ ಸೋಂಕು ಪೀಡಿತರ  ಸಾವುನೋವಿನ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. 

ಈ ಹಿಂದೆ ಇದೇ ವಿಚಾರವಾಗಿ ಮಾತನಾಡಿದ್ದ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಮೈಕ್ ರಿಹಾನ್ ಅವರು, 'ವಿಶ್ವದಲ್ಲಿ ಇದುವರೆಗೂ ಕಾಣಿಸಿಕೊಂಡಿರುವ ಕೊರೋನಾ ಸೋಂಕಿನ ವಿವಿಧ ಮಾದರಿಗಳಲ್ಲಿ ಡೆಲ್ಟಾ ಮಾದರಿ ಅತ್ಯಂತ ವೇಗವಾಗಿ ಹರಡುವ ಗುಣವನ್ನು ಹೊಂದಿದೆ. ಹೀಗಾಗಿ  ಜನರು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮತ್ತು ಉದಾಸೀನ ಮನೋಭಾವ ತೋರಬಾರದು ಮತ್ತು ತೀವ್ರ ಎಚ್ಚರಿಕೆ ವಹಿಸಬೇಕು. ವಿವಿಧ ದೇಶಗಳು ಅದರಲ್ಲೂ ಡೆಲ್ಟಾ ಮಾದರಿಯ ರೂಪಾಂತರ ಕಾಣಿಸಿಕೊಂಡಿರುವ ದೇಶಗಳು ತಮ್ಮ ದೇಶಗಳಲ್ಲಿ ಸೋಂಕು ಹೆಚ್ಚು ಹರಡದಂತೆ ಜಾಗ್ರತೆ ವಹಿಸಬೇಕು ಎಂದು ಕೂಡ  ಸಲಹೆ ನೀಡಿದ್ದರು.

ರೂಪಾಂತರ ಸೋಂಕು ಕಾಣಿಸಿಕೊಂಡ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಿದ್ದಾರೆ. ಹೀಗಾಗಿ ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಎಚ್ಚರಿಕೆ ವಹಿಸುವ ತುರ್ತು ಅಗತ್ಯವಿದೆ. ಸ್ಕಾಟ್ಲೆಂಡ್ನಲ್ಲಿ ಇತ್ತೀಚೆಗೆ ನಡೆಸಿದ ಅಧ್ಯಯನ ಮತ್ತು ಅಂತಾರಾಷ್ಟ್ರೀಯ ವೈದ್ಯಕೀಯ ಜರ್ನಲ್ ಲ್ಯಾನ್ಸೆಟ್ನಲ್ಲಿ ಪ್ರಕಟವಾದ  ವರದಿಯಲ್ಲಿ ಕೋವಿಡ್-19 ರ ಡೆಲ್ಟಾ ರೂಪಾಂತರದಿಂದ ಸೋಂಕಿತ ರೋಗಿಗಳಿಗೆ ಆಸ್ಪತ್ರೆಗೆ ದಾಖಲಾಗುವ ಪ್ರಮಾಣವು ಹೆಚ್ಚಾಗಿದ್ದು, ಆಲ್ಫಾ ರೂಪಾಂತರಕ್ಕೆ ಹೋಲಿಕೆ ಮಾಡಿದರೆ ಡೆಲ್ಟಾ ರೂಪಾಂತರದಿಂದ ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತರ ಪ್ರಮಾಣ ಶೇ.85ರಷ್ಟು ಹೆಚ್ಚಾಗಿದೆ ಎಂದು ಹೇಳಿದೆ.

ಜಗತ್ತಿನ ವಿವಿಧ ದೇಶಗಳಲ್ಲಿ ಈಗಾಗಲೇ ಡೆಲ್ಟಾ ರೂಪಾಂತರಿ ಸೋಂಕಿನ ಎರಡು-ಮೂರನೇ ಅಲೆಗಳು ಕಾಣಿಸಿಕೊಂಡು ಆಯಾ ದೇಶಗಳಲ್ಲಿ ಅನೇಕ ಸಾವು-ನೋವು ಆರ್ಥಿಕ ಹಾನಿ ಸಂಭವಿಸಿರುವ ನಡುವೆ ಡೆಲ್ಟಾ ರೂಪಾಂತರ ಸೋಂಕು ಮತ್ತಷ್ಟು ಹಾನಿ ಉಂಟು ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಡೆಲ್ಟಾ ಪ್ರಬಲ ವಂಶಾವಳಿಯಾಗುವ ಆತಂಕ
ಡೆಲ್ಟಾ ರೂಪಾಂತರವು ಆಲ್ಫಾ ರೂಪಾಂತರಕ್ಕಿಂತ ಗಮನಾರ್ಹವಾಗಿ ಹೆಚ್ಚು ಹರಡಬಲ್ಲದು ಮತ್ತು ಪ್ರಸ್ತುತ ಪ್ರವೃತ್ತಿಗಳು ಮುಂದುವರಿದರೆ ಪ್ರಬಲ ವಂಶಾವಳಿಯಾಗುವ ನಿರೀಕ್ಷೆಯಿದೆ. ಜೂನ್ 8 ರಂದು ಕೊನೆಯ ವರದಿಲ್ಲಿ, ಡೆಲ್ಟಾ ರೂಪಾಂತರದ ಫಿನೋಟೈಪಿಕ್ ಗುಣಲಕ್ಷಣಗಳ ಬಗ್ಗೆ ಹೊಸ ಪುರಾವೆಗಳನ್ನು  ಪ್ರಕಟಿಸಲಾಗಿದೆ. ಸಿಂಗಾಪುರದ ಅಧ್ಯಯನವು ಡೆಲ್ಟಾ ರೂಪಾಂತರದ ಸೋಂಕು ಹೆಚ್ಚಿನ ಪ್ರಮಾಣದ ಆಕ್ಸಿಜನ್ ಅವಶ್ಯಕತೆ, ತೀವ್ರ ನಿಗಾ ಘಟಕ (ಐಸಿಯು) ಪ್ರವೇಶ ಅಥವಾ ಸಾವುಗಳ ಕುರಿತು ವರದಿ ಮಾಡಿತ್ತು.

ಇದಲ್ಲದೆ, ಜಪಾನ್‌ನಲ್ಲಿನ ಒಂದು ಅಧ್ಯಯನವು ಇತರೆ ರೂಪಾಂತರಗಳಿಗೆ ಹೋಲಿಕೆ ಮಾಡಿದರೆ ಡೆಲ್ಟಾ ರೂಪಾಂತರದ ಸಂತಾನೋತ್ಪತ್ತಿ ಪ್ರಮಾಣ ಹೆಚ್ಚು ಎಂದು ಹೇಳಿತ್ತು. ಡಿಸೆಂಬರ್ 2020 ರ ಮೊದಲು ಜಪಾನ್‌ನಲ್ಲಿ ಚಲಾವಣೆಯಲ್ಲಿರುವ ರೂಪಾಂತರಗಳೊಂದಿಗೆ ಹೋಲಿಸಿದಾಗ, ಆಲ್ಫಾ ರೂಪಾಂತರಿ ಸಂತಾನೋತ್ಪತ್ತಿ ಪ್ರಮಾಣ 1.56ರಷ್ಟಿದ್ದರೆ. ಇದೇ ಪ್ರಮಾಣ ಡೆಲ್ಟಾದಲ್ಲಿ 1.78ರಷ್ಟಿದೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT