ಡ್ಯಾನಿಶ್ ಸಿದ್ದಿಕಿ 
ವಿದೇಶ

ಅಫ್ಘಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ರಾಯಿಟರ್ಸ್ ಇಂಡಿಯಾ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಹತ್ಯೆ

ರಾಯಿಟರ್ಸ್ ಇಂಡಿಯಾದ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಅಫ್ಘಾನಿಸ್ತಾನದ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತ್ಯೆಯಾಗಿದ್ದಾರೆ.

ಕಾಬೂಲ್: ರಾಯಿಟರ್ಸ್ ಇಂಡಿಯಾದ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಅಫ್ಘಾನಿಸ್ತಾನದ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತ್ಯೆಯಾಗಿದ್ದಾರೆ. ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಕಳೆದ ಕೆಲವು ದಿನಗಳಿಂದ ಕಂದಹಾರ್‌ನ ಪರಿಸ್ಥಿತಿಯನ್ನು ವಿವರಿಸುವ ವರದಿ ಚಿತ್ರಿಸಿದ್ದರು ಎಂದು ಅಫಘಾನ್ ಸುದ್ದಿ ಚಾನೆಲ್ TOLOnews ವರದಿ ಮಾಡಿದೆ.

ಅಫ್ಘಾನಿಸ್ತಾನದ ಭಾರತದ ರಾಯಭಾರಿ ಫರೀದ್ ಮಾಮುಂಡ್ಜೆ ಟ್ವಿಟ್ಟರ್ ನಲ್ಲಿ ಈ ಸುದ್ದಿಯನ್ನು ದೃಢಪಡಿಸಿದ್ದಾರೆ.

ಪಾಕಿಸ್ತಾನದೊಂದಿಗಿನ ಪ್ರಮುಖ ಗಡಿ ಕಾಯುವಿಕೆ ಹಿಂಪಡೆಯುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಅಫ್ಘಾನ್ ಪಡೆಗಳು ಸ್ಪಿನ್ ಬೋಲ್ಡಾಕ್ ನಲ್ಲಿ ತಾಲಿಬಾನ್ ಹೋರಾಟಗಾರರೊಂದಿಗೆ ಘರ್ಷಣೆ ನಡೆಸಿವೆ ಎಂದು ಎಎಫ್ ಪಿ ವರದಿ ಮಾಡಿದೆ.

2018 ರಲ್ಲಿ, ಸಿದ್ದಿಕಿ ಮತ್ತು ಅವರ ಸಹೋದ್ಯೋಗಿ ಅಡ್ನಾನ್ ಅಬಿಡಿ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟಿನ ಸಮಸ್ಯೆ ಚಿತ್ರಿಸಿದ್ದಕ್ಕಾಗಿ ಫೀಚರ್ ಫೋಟೋಗ್ರಫಿ ವಿಭಾಗದಲ್ಲಿ ಪುಲಿಟ್ಜೆರ್ ಪ್ರಶಸ್ತಿಯನ್ನು ಪಡೆದ ಮೊದಲ ಭಾರತೀಯರೆನಿಸಿದ್ದರು. ಸಿದ್ದಿಕಿ 2020 ರ ದೆಹಲಿ ಗಲಭೆಗಳು, ಕೋವಿಡ್-19 ಸಾಂಕ್ರಾಮಿಕ, 2015 ರಲ್ಲಿ ನೇಪಾಳ ಭೂಕಂಪ, 2016-17ರಲ್ಲಿ ಮೊಸುಲ್ ಕದನ, ಮತ್ತು ಹಾಂಗ್ ಕಾಂಗ್‌ನಲ್ಲಿ ನಡೆದ 2019–2020 ಪ್ರತಿಭಟನೆಗಳನ್ನೂ ತಮ್ಮ ಕ್ಯಾಮೆರಾದಲ್ಲಿ ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT