ವಿದೇಶ

ಪಿಒಕೆ ಚುನಾವಣೆ: ಇಮ್ರಾನ್ ಖಾನ್‌ ನೇತೃತ್ವದ ಪಕ್ಷಕ್ಕೆ ಗೆಲುವು

Srinivasamurthy VN

ಇಸ್ಲಾಮಾಬಾದ್‌: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷವು ಭರ್ಜರಿ ಜಯಭೇರಿ ಭಾರಿಸಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.

ಆ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಸ್ಥಳೀಯ ಸುದ್ದಿವಾಹಿನಿಗಳು ವರದಿ ಮಾಡಿರುವಂತೆ, 'ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಿಟಿಐ ಪಕ್ಷವು 23 ಸ್ಥಾನಗಳನ್ನು ಗೆದ್ದರೆ, ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪಾಕಿಸ್ತಾನ ಮುಸ್ಲಿಂ  ಲೀಗ್-ನವಾಜ್ (ಪಿಎಂಎಲ್-ಎನ್) 6 ಸ್ಥಾನಗಳಲ್ಲಿ ತನ್ನದಾಗಿಸಿಕೊಂಡಿದೆ. ಇದಲ್ಲದೆ ಮುಸ್ಲಿಂ ಕಾನ್ಫರೆನ್ಸ್ ‌(ಎಂಸಿ), ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್‌ ಪಾರ್ಟಿ(ಜೆಕೆಪಿಪಿ) ತಲಾ ಒಂದು ಸ್ಥಾನವನ್ನು ಗೆದ್ದಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

ಗೆಲುವಿನ ಸಂಭ್ರಮದ ನಡುವೆಯೇ ಚುನಾವಣಾ ವಂಚನೆ ಆರೋಪ
ಈ ಚುನಾವಣೆಯಲ್ಲಿ ವಂಚನೆ ನಡೆದಿದೆ. ಇದಕ್ಕೆ ಸಾಕ್ಷ್ಯಾಧಾರಗಳು ಇವೆ ಎಂದು ಪಿಪಿಪಿಯ ಉಪಾಧ್ಯಕ್ಷೆ ಶೆರಿ ರೆಹಮಾನ್‌ ದೂರಿದ್ದಾರೆ. ಮತದಾನದ ವೇಳೆ ಪಿಟಿಐ ಕಾರ್ಯಕರ್ತರು ಪಿಪಿಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ. ಹಲವಾರು ಮತಗಟ್ಟೆಗಳಲ್ಲಿ ಮತದಾರರ ಪಟ್ಟಿಯಲ್ಲಿ ವ್ಯತ್ಯಾಸಗಳಿದ್ದವು ಎಂದು  ಹೇಳಿದ್ದಾರೆ.
 

SCROLL FOR NEXT