ವಿದೇಶ

ಕಾಶ್ಮೀರ ನಾಯಕರ ಜೊತೆ ಪ್ರಧಾನಿ ಮೋದಿ ಸಭೆ: ಪಾಕ್ ಕಿಡಿ

Manjula VN

ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ನಾಯಕರ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರ್ವಪಕ್ಷ ಸಭೆ ಕರೆದ ಬೆನ್ನಲ್ಲೇ ಇದಕ್ಕೆ ಪಾಕಿಸ್ತಾನ ತೀವ್ರವಾಗಿ ಕಿಡಿಕಾರಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿಚವ ಮೊಹಮ್ಮದ್ ಖುರೇಷಿ ಅವರು, ಕಾಶ್ಮೀರವನ್ನು ವಿಭಜಿಸಲು ಮತ್ತು ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸಲು ಭಾರತ ನಡೆಸುವ ಯಾವುದೇ ಕ್ರಮವನ್ನು ವಿರೋಧಿಸುವುದಾಗಿ ಹೇಳಿದ್ದಾರೆ. 

ಜೂನ್ 24 ರಂದು ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರದ 14 ಪ್ರಮುಖ ರಾಜಕೀಯ ನಾಯಕರ ಜೊತೆ ದೆಹಲಿಯಲ್ಲಿ ಸಭೆಯನ್ನು ಕರೆದಿದ್ದಾರೆ. 

ಸಭೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ನಡೆಸುವುದೂ ಸೇರಿದಂತೆ ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರದ ಇತರ ಕೆಲವು ನಾಯಕರೂ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

SCROLL FOR NEXT