ಸಂಗ್ರಹ ಚಿತ್ರ 
ವಿದೇಶ

ಢಾಕಾದಲ್ಲಿ ಸ್ಫೋಟ, ಕಟ್ಟಡ ಕುಸಿದು 7 ಸಾವು

ಬಾಂಗ್ಲಾದೇಶದ ರಾಜಧಾನಿ ಢಾಕಾದ ಮೊಗ್‌ಬಜಾರ್ ಪ್ರದೇಶದಲ್ಲಿ ಸ್ಫೋಟದ ನಂತರ ಕಟ್ಟಡವೊಂದು ಕುಸಿದು 7 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಮಂದಿ ಗಾಯಗೊಂಡಿದ್ದಾರೆ ಎಂದು ಮೆಟ್ರೋಪಾಲಿಟನ್ ಪೊಲೀಸ್ ಆಯುಕ್ತ ಶಫಿಕುಲ್ ಇಸ್ಲಾಂ ತಿಳಿಸಿದ್ದಾರೆ.

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದ ಮೊಗ್‌ಬಜಾರ್ ಪ್ರದೇಶದಲ್ಲಿ ಸ್ಫೋಟದ ನಂತರ ಕಟ್ಟಡವೊಂದು ಕುಸಿದು 7 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಮಂದಿ ಗಾಯಗೊಂಡಿದ್ದಾರೆ ಎಂದು ಮೆಟ್ರೋಪಾಲಿಟನ್ ಪೊಲೀಸ್ ಆಯುಕ್ತ ಶಫಿಕುಲ್ ಇಸ್ಲಾಂ ತಿಳಿಸಿದ್ದಾರೆ.

ಭಾನುವಾರ ತಡರಾತ್ರಿ ಸಂಭವಿಸಿದ ಸ್ಫೋಟಕ್ಕೆ ಅನಿಲ ಸೋರಿಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ . ಈ ಘಟನೆಯಲ್ಲಿ 7 ಜನರು ಮೃತಪಟ್ಟಿದ್ದಾರೆ.

ಇದರ ಜೊತೆಗೆ ಘಟನೆಯಲ್ಲಿ ಪಾದಚಾರಿಗಳು ಸೇರಿದಂತೆ ಕನಿಷ್ಠ 40 ಮಂದಿ ಗಾಯಗೊಂಡಿದ್ದಾರೆ. ಜೊತೆಗೆ ಸ್ಫೋಟದಿಂದ ಎರಡು ಬಸ್‌ಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ. 

ಗಾಯಗೊಂಡವರನ್ನುಢಾಕಾ ಮೆಡಿಕಲ್ ಕಾಲೇಜ್ ಆಸ್ಪತ್ರೆ (ಡಿಎಂಸಿಎಚ್) ಮತ್ತು ಶೇಖ್ ಹಸೀನಾ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಬರ್ನ್ ಅಂಡ್ ಪ್ಲಾಸ್ಟಿಕ್ ಸರ್ಜರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿ ಆರು ಶವಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದರು. ಘಟನೆಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ ಎಂದು ಅವರು ಹೇಳಿದರು. ಅಗ್ನಿಶಾಮಕ ದಳದ 13 ಘಟಕಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಗ್ನಿಶಾಮಕ ಸೇವೆ ಮತ್ತು ನಾಗರಿಕ ರಕ್ಷಣಾ ಪ್ರಧಾನ ಕಚೇರಿ ಉಸ್ತುವಾರಿ (ಮಾಧ್ಯಮ ಕೋಶ) ಯುಎನ್‌ಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್