ಸಾಂದರ್ಭಿಕ ಚಿತ್ರ 
ವಿದೇಶ

ದೇಶಾದ್ಯಂತ ಲಾಕ್ ಡೌನ್ ಹೇರಲು ಭಾರತಕ್ಕೆ ಅಮೆರಿಕ ಸಲಹೆ

ಭಾರತದಲ್ಲಿ ಹೆಚ್ಚಾಗುತ್ತಿರುವ ಕೊರೋನಾವೈರಸ್ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಮೆರಿಕದ ಶ್ವೇತಭವನದ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಆಂಥೋನಿ ಫೌಸಿ, ದೇಶಾದ್ಯಂತ ಲಾಕ್ ಡೌನ್ ಹೇರಲು ಶಿಫಾರಸು ಮಾಡಿದ್ದಾರೆ.

ವಾಷಿಂಗ್ಟನ್: ಭಾರತದಲ್ಲಿ ಹೆಚ್ಚಾಗುತ್ತಿರುವ ಕೊರೋನಾವೈರಸ್ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಮೆರಿಕದ ಶ್ವೇತಭವನದ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಆಂಥೋನಿ ಫೌಸಿ, ದೇಶಾದ್ಯಂತ ಲಾಕ್ ಡೌನ್ ಹೇರಲು ಶಿಫಾರಸು ಮಾಡಿದ್ದಾರೆ.

ಅಲ್ಲದೇ, ಸಾಮೂಹಿಕ ಲಸಿಕೆ ಅಭಿಯಾನ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮೇಕ್ ಶಿಫ್ಟ್  ಆಸ್ಪತ್ರೆಗಳನ್ನು ಸ್ಥಾಪಿಸುವಂತೆ ಸಲಹೆ ನೀಡಿದ್ದಾರೆ.ಭಾರತದಲ್ಲಿನ ಪರಿಸ್ಥಿತಿ ಅತ್ಯಂತ  ಗಂಭೀರವಾಗಿದೆ ಎಂಬುದು ಪ್ರತಿಯೊಬ್ಬರಿಗೂ ಗೊತ್ತಿದೆ ಎಂದು ಸಾಂಕ್ರಾಮಿಕ ರೋಗಗಳ  ತಜ್ಞರು ಆಗಿರುವ ಡಾ. ಫೌಸಿ ಹೇಳಿದ್ದಾರೆ.

ಆಸ್ಪತ್ರೆಗಳು, ಬೆಡ್ , ಆಕ್ಸಿಜನ್ ಪೂರೈಕೆಯಲ್ಲಿ ಕೊರತೆಯಿಂದ ನಿಜವಾಗಿಯೂ ಹತಾಶದಾಯಕ ಪರಿಸ್ಥಿತಿಯಾಗಿ ಹೊರಹೊಮ್ಮಿದೆ. ಆದ್ದರಿಂದ ಇತರ ರಾಷ್ಟ್ರಗಳು ಭಾರತದ ನೆರವಿಗೆ ನಿಲ್ಲಬೇಕಾಗಿದೆ. ಹೆಚ್ಚಿನ ಸಂಖ್ಯೆಯ ಜನರಿಗೆ ಲಸಿಕೆ ಹಾಕಬೇಕಾಗಿದೆ. 
ಭಾರತವೇ ತಯಾರಿಸಿರುವ ಎರಡು ಲಸಿಕೆಗಳಿವೆ.ಇದರೊಂದಿಗೆ ಇತರ ರಾಷ್ಟ್ರಗಳಿಂದ ಲಸಿಕೆ ಖರೀದಿಸಬೇಕು, ಭಾರತಕ್ಕೆ ಲಸಿಕೆ ಪೂರೈಸಲು ಅಮೆರಿಕ, ರಷ್ಯಾದಂತಹ ರಾಷ್ಟ್ರಗಳು ಮುಂದಾಗಬೇಕು ಎಂದು ಅವರು ಹೇಳಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ದೇಶಾದ್ಯಂತ ಲಾಕ್ ಡೌನ್ ಮಾಡುವುದೇ ಉತ್ತಮ. ಕಳೆದ ವರ್ಷ ಚೀನಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್
ರಾಷ್ಟ್ರಗಳು ನಿಗದಿತ ಅವಧಿವರೆಗೂ ಸಂಪೂರ್ಣ ಲಾಕ್ ಡೌನ್ ಮಾಡಿದ್ದರಿಂದ ಆ ರಾಷ್ಟ್ರಗಳಲ್ಲಿ ಸೋಂಕಿನ ಸಂಖ್ಯೆ ಕಡಿಮೆಯಾಗಿದೆ. ಆರು ತಿಂಗಳ ಕಾಲ ಲಾಕ್ ಡೌನ್ ಮಾಡಬೇಕಾಗಿಲ್ಲ, ಕೆಲವು ವಾರಗಳವರೆಗೂ ಲಾಕ್ ಡೌನ್ ಮಾಡಬೇಕಾಗಿದೆ. ಆಗ ಮಾತ್ರ ಸೋಂಕು ಹರಡದಂತೆ ಸ್ವಲ್ಪ ಮಟ್ಟಿಗೆ ತಡೆಗಟ್ಟಲು ಸಾಧ್ಯವಿರುತ್ತದೆ ಎಂದು ಡಾ. ಆಂಥೋನಿ ಫೌಸಿ ಸಲಹೆ ನೀಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್