ವಿದೇಶ

ಕಾಬೂಲ್‌ ಶಾಲೆ ಬಳಿ ಬಾಂಬ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 60ಕ್ಕೆ ಏರಿಕೆ

Manjula VN

ಅಫ್ಘಾನಿಸ್ತಾನ್: ಕಾಬೂಲ್ ಶಾಲೆ ಬಳಿ ಬಾಂಬ್ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ ಸೋಮವಾರ 60ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಕಳೆದ ಶುಕ್ರವಾರ ಸಂಜೆ 4.30 ರ ಸುಮಾರಿಗೆ ಸಯೀದ್ ಉಲ್ ಶುಹಾದಾ ಬಾಲಕಿಯರ ಶಾಲೆಯೊಂದರ ಬಳಿ ಬಾಂಬ್ ಸ್ಪೋಟಗೊಂಡಿತ್ತು.

ಉಗ್ರರು ಹೆಣ್ಣುಮಕ್ಕಳ ಶಾಲೆಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದರು. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ವಿದ್ಯಾರ್ಥಿನಿಯರೇ ಇದ್ದು, ಶಾಲೆಯ ಹಲವು ಅಧಿಕಾರಿಗಳು ಸಹ ಇದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಇದೀಗ ಸಾವಿನ ಸಂಖ್ಯೆ 60ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. 

ಘಟನೆಗೆ ತೀವ್ರ ಘಟನೆ ವ್ಯಕ್ತಪಡಿಸಿರುವ ಅಧ್ಯಕ್ಷ ಅಶ್ರಫ್ ಘಾನಿಯವರು, ತಾಲಿಬಾನ್ ಉಗ್ರರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದರು. 

ಈ ಬೆಳವಣಿಗೆ ಬಳಿಕ ದಾಳಿಯ ಹೊಣೆಯನ್ನು ತಾಲಿಬಾನ್ ಉಗ್ರ ಸಂಘಟನೆ ನಿರಾಕರಿಸಿದೆ ಎಂದು ತಿಳಿದುಬಂದಿದೆ. 

SCROLL FOR NEXT