ಹಸುವಿನ ಸಗಣಿ 
ವಿದೇಶ

ಯುಎಸ್ ಗೆ ಆಗಮಿಸಿದ ಭಾರತೀಯ ಪ್ರಯಾಣಿಕನ ಲಗೇಜ್ ನಲ್ಲಿ ಹಸುವಿನ ಸೆಗಣಿ ಪತ್ತೆ!

ಯುಸ್ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ ಏಜೆಂಟರು ವಾಷಿಂಗ್ಟನ್ ಡಿಸಿಯ ಉಪನಗರದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಭಾರತದ ಪ್ರಯಾಣಿಕರ ಲಗೇಜ್ ಬ್ಯಾಗ್ ನಲ್ಲಿ ಹಸುವಿನ ಸೆಗಣಿ ಪತ್ತೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಷಿಂಗ್ಟನ್: ಯುಸ್ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ ಏಜೆಂಟರು ವಾಷಿಂಗ್ಟನ್ ಡಿಸಿಯ ಉಪನಗರದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಭಾರತದ ಪ್ರಯಾಣಿಕರ ಲಗೇಜ್ ಬ್ಯಾಗ್ ನಲ್ಲಿ ಹಸುವಿನ ಸೆಗಣಿ ಪತ್ತೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಸುವಿನ ಸಗಣಿಯನ್ನು ಯುಎಸ್ ನಲ್ಲಿ ನಿಷೇಧಿಸಲಾಗಿದೆ ಏಕೆಂದರೆ ಅವುಗಳು ಹೆಚ್ಚು ಸಾಂಕ್ರಾಮಿಕ ರೋಗ ಅಥವಾ ಕಾಲುಬಾಯಿರೋಗದ ಸಂಭಾವ್ಯ ವಾಹಕಗಳಾಗಿವೆ.

"ಇದು ಸುಳ್ಳು ಪ್ರಕಟಣೆಯಲ್ಲ. ಏರ್ ಇಂಡಿಯಾ ವಿಮಾನದ ಪ್ರಯಾಣಿಕ ಸಿಬಿಪಿಯ ತಪಾಸಣೆ ಕೇಂದ್ರಕ್ಕೆ ತಲುಪಿದ ನಂತರ ಸಿಬಿಪಿ ಕೃಷಿ ತಜ್ಞರು ಸೂಟ್ ಕೇಸ್ ನಲ್ಲಿ ಎರಡು ಹಸುವಿನ ಸಗಣಿ ಉಂಡೆಯನ್ನು ಕಂಡುಕೊಂಡಿದ್ದಾರೆ" ಎಂದು ಮಾಧ್ಯಮ ಪ್ರಕಟಣೆ ಸೋಮವಾರ ತಿಳಿಸಿದೆ.

"ಕಾಲುಬಾಯಿ ರೋಗವು ಜಾನುವಾರು ಮಾಲೀಕರು ಹೆಚ್ಚು ಭಯಪಡುವ, ಗಂಭೀರ ಕಾಯಿಲೆಗಳಲ್ಲಿ ಒಂದಾಗಿದೆ, ಮತ್ತು ಇದು ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣೆಯ ಕೃಷಿ ಸಂರಕ್ಷಣಾ ಕಾರ್ಯಾಚರಣೆಯ ಮಹತ್ವದ ಕಾರ್ಯಾಚರಣೆಯಾಗಿದೆ" ಎಂದು ಬಾಲ್ಟಿಮೋರ್ ಫೀಲ್ಡ್ ಆಫೀಸ್ ಸಿಬಿಪಿಯ ಕ್ಷೇತ್ರ ಕಾರ್ಯಾಚರಣೆಗಳ ನಿರ್ದೇಶಕ ಕೀತ್ ಫ್ಲೆಮಿಂಗ್ ಹೇಳಿದರು.

ಹಸುವಿನ ಸಗಣಿ ವಿಶ್ವದ ಕೆಲವು ಭಾಗಗಳಲ್ಲಿ ಪ್ರಮುಖ ಶಕ್ತಿ ಮತ್ತು ಅಡುಗೆ ಮೂಲವಾಗಿದೆ ಎಂದು ತಿಳಿದಿದ್ದರೂ ಹಸುವಿನ ಚರ್ಮವನ್ನು ಡಿಟಾಕ್ಸಿಫೈಯರ್, ಆಂಟಿಮೈಕ್ರೊಬಿಯಲ್ ಮತ್ತು ರಸಗೊಬ್ಬರವಾಗಿ ಬಳಸಲಾಗುತ್ತದೆ ಎಂದು ವರದಿಯಾಗಿದೆ. ಈ ಪ್ರಯೋಜನಗಳ ಹೊರತಾಗಿಯೂ, ಕಾಲುಬಾಯಿ ರೋಗದ ಸಂಭಾವ್ಯ ಕಾರಣಗಳಿಂದಾಗಿ ಗೋವಿನ ಸಗಣಿ ನಿಷೇಧಿಸಲಾಗಿದೆ ಎಂದು ಸಿಬಿಪಿ ಹೇಳಿದೆ.

ಯು.ಎಸ್. ಕೃಷಿ ಇಲಾಖೆಯ ಪ್ರಕಾರ, ಕಾಲುಬಾಯಿ ರೋಗವು ವಿಶ್ವಾದ್ಯಂತದ ಜಾನುವಾರುಗಳಿಗೆ ತೊಂದರೆ ತರುವ ರೋಗವಾಗಿದ್ದು ಇದು ವ್ಯಾಪಕವಾಗಿ ಮತ್ತು ವೇಗವಾಗಿ ಹರಡಬಹುದು ಮತ್ತು ಜಾನುವಾರುಗಳ ಸಂಖ್ಯೆಗೆ ಗಮನಾರ್ಹ ನಷ್ಟವನ್ನು ತರಬಲ್ಲದು. 1929ರಿಂದ ಯುಎಸ್ ಕಾಲುಬಾಯಿ ರೋಗದಿಂದ ಮುಕ್ತವಾಗಿದೆ ಎಂದು ಹೇಳಿಕೆಯೊಂದರಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT