ಮೆಹುಲ್ ಚೋಕ್ಸಿ 
ವಿದೇಶ

ಪಿಎನ್ ಬಿ ಪ್ರಕರಣ: ನಾಪತ್ತೆಯಾಗಿದ್ದ ಮೆಹುಲ್ ಚೋಕ್ಸಿ ಡೊಮಿನಿಕಾದಲ್ಲಿ ಬಂಧನ

ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ಸಾವಿರಾರು ಕೋಟಿ ರೂ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ಸಾವಿರಾರು ಕೋಟಿ ರೂ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಆ್ಯಂಟಿಗುವಾ ಮತ್ತು ಬಾರ್ಬುಡಾದಿಂದಲೂ ಚೋಕ್ಸಿ ದಿಢೀರ್ ನಾಪತ್ತೆಯಾಗಿದ್ದ. ಚೋಕ್ಸಿ ವಿರುದ್ಧ ಇಂಟರ್‌ಪೋಲ್‌ ಯೆಲ್ಲೋ ನೋಟಿಸ್‌ ಜಾರಿಗೊಳಿಸಿತ್ತು. ಈತನ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದರು. ಇದೀಗ ಮಂಗಳವಾರ ರಾತ್ರಿ ಚೋಕ್ಸಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬೋಟ್  ನಲ್ಲಿ ಪರಾರಿಯಾಗುವ ವೇಳೆ ಪೊಲೀಸರು ಚೋಕ್ಸಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ. 

ಆಂಟಿಗುವಾ ಮತ್ತು ಬಾರ್ಬುಡಾದ ಪೌರತ್ವ ಪಡೆದಿರುವ ಚೋಕ್ಸಿ 2018 ರಿಂದ ಅಲ್ಲಿಯೇ ವಾಸ್ತವ್ಯ ಹೂಡಿದ್ದ. ದ್ವೀಪದ ದಕ್ಷಿಣ ಪ್ರದೇಶದಲ್ಲಿ ಭಾನುವಾರ ತನ್ನ ವಾಹನದಲ್ಲಿ ಕಾಣಿಸಿಕೊಂಡಿದ್ದ. ನಂತರ, ಆತನ ವಾಹನ ಮಾತ್ರ ಪತ್ತೆಯಾಗಿತ್ತು. ಭಾನುವಾರದಿಂದ ಚೋಕ್ಸಿ ಸುಳಿವು ಸಿಕ್ಕಿರಲಿಲ್ಲ ಎಂದು ಅವರ ವಕೀಲ  ವಿಜಯ್‌ ಅಗರ್ವಾಲ್‌ ದೃಢಪಡಿಸಿದ್ದರು.

ಇನ್ನು ಪಿಎನ್ ಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಚೋಕ್ಸಿಯನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಆ್ಯಂಟಿಗುವಾ ಸರ್ಕಾರವನ್ನು ಕೇಳಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಭಾನುವಾರ ಸಂಜೆ ಚೋಕ್ಸಿ ಕಾರಿನಲ್ಲಿ ತೆರಳಿ ನಿಗೂಢ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ. ಇದೀಗ  ಚೋಕ್ಸಿಯನ್ನು ಬಂಧಿಸಿರುವ ಸ್ಥಳೀಯ ಪೊಲೀಸರು ಆಂಟಿಗುವಾ ಮತ್ತು ಬಾರ್ಬುಡಾದ ರಾಯಲ್ ಪೊಲೀಸ್ ಪಡೆಗೆ ಚೋಕ್ಸಿಯನ್ನು ಹಸ್ತಾಂತರಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT