ಮಲಾಲಾ ವಿವಾಹ 
ವಿದೇಶ

ಲಂಡನ್: ನೊಬೆಲ್ ಪುರಸ್ಕೃತೆ ಮಲಾಲಾ ಯೂಸುಫ್‌ಜಾಯ್‌ ದಾಂಪತ್ಯ ಜೀವನಕ್ಕೆ ಪ್ರವೇಶ

ನೊಬೆಲ್ ಪುರಸ್ಕೃತ ಮಲಾಲಾ ಯೂಸುಫ್‌ಜಾಯ್‌ ಅವರು ಅಸರ್ ಎಂಬುವವರನ್ನು ಮದುವೆಯಾಗಿರುವುದಾಗಿ ಟ್ವೀಟ್ ಮಾಡಿದ್ದಾರೆ. ಬರ್ಮಿಂಗ್‌ಹ್ಯಾಂ ನಗರದ ನಿವಾಸದಲ್ಲಿ ಕುಟುಂಬದವರ ಸಮ್ಮುಖದಲ್ಲಿ ವಿವಾಹ ಸಮಾರಂಭ ನಡೆದಿದೆ.

ಲಂಡನ್:  ನೊಬೆಲ್ ಪುರಸ್ಕೃತ ಮಲಾಲಾ ಯೂಸುಫ್‌ಜಾಯ್‌ ಅವರು ಅಸರ್ ಎಂಬುವವರನ್ನು ಮದುವೆಯಾಗಿರುವುದಾಗಿ ಟ್ವೀಟ್ ಮಾಡಿದ್ದಾರೆ. ಬರ್ಮಿಂಗ್‌ಹ್ಯಾಂ ನಗರದ ನಿವಾಸದಲ್ಲಿ ಕುಟುಂಬದವರ ಸಮ್ಮುಖದಲ್ಲಿ ವಿವಾಹ ಸಮಾರಂಭ ನಡೆದಿದೆ.

‘ಇದು ನನ್ನ ಜೀವನದಲ್ಲಿ ಅಮೂಲ್ಯವಾದ ದಿನ. ಅಸರ್ ಮತ್ತು ನಾನು ವಿವಾಹವಾಗಿದ್ದು, ಜೀವನ ಸಂಗಾತಿಗಳಾಗಿದ್ದೇವೆ. ಬರ್ಮಿಂಗ್‌ಹ್ಯಾಂನ ನಿವಾಸದಲ್ಲಿ ನಮ್ಮ ಕುಟುಂಬದವರ ಉಪಸ್ಥಿತಿಯಲ್ಲಿ ವಿವಾಹ ನೆರವೇರಿದೆ. ನಿಮ್ಮೆಲ್ಲರ ಹಾರೈಕೆಗಳಿರಲಿ’ ಎಂದು ಮಲಾಲಾ ಟ್ವೀಟ್ ಮಾಡಿದ್ದಾರೆ.

ಟ್ವಿಟ್ಟರ್ ಮೂಲಕ ತಮ್ಮ ವಿವಾಹದ ಸುದ್ದಿಯನ್ನು ಶಿಕ್ಷಣ ಕಾರ್ಯಕರ್ತೆ ಮಲಾಲ ಹಂಚಿಕೊಂಡಿದ್ದಾರೆ. ತಾವು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಸಣ್ಣ ಸಮಾರಂಭದಲ್ಲಿ ವಿವಾಹವಾಗಿದ್ದೇವೆ ಎಂದು ಬಹಿರಂಗಪಡಿಸಿದ್ದಾರೆ. "ಇಂದು ನನ್ನ ಜೀವನದಲ್ಲಿ ಅಮೂಲ್ಯವಾದ ದಿನ. ಅಸ್ಸರ್ ಮತ್ತು ನಾನು ದಾಂಪತ್ಯ ಜೀವನಕ್ಕೆ ಕಾಲಿಟ್ಟೆದ್ದೇವೆ.

ನಾವು ನಮ್ಮ ಕುಟುಂಬಗಳೊಂದಿಗೆ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಮನೆಯಲ್ಲಿ ಸಣ್ಣ ನಿಕ್ಕಾ ಸಮಾರಂಭವನ್ನು ಆಚರಿಸಿದ್ದೇವೆ. ದಯವಿಟ್ಟು ನಿಮ್ಮ ಪ್ರಾರ್ಥನೆಗಳನ್ನು ನಮಗೆ ಕಳುಹಿಸಿ. ಮುಂದಿನ ಪ್ರಯಾಣದಲ್ಲಿ ನಾವು ಒಟ್ಟಿಗೆ ನಡೆಯಲು ಬಯಸಿದ್ದೇವೆ" ಎಂದು ಮಲಾಲ ಬರೆದಿದ್ದಾರೆ.

ಪತಿಯ ಬಗ್ಗೆ ಮಲಾಲಾ ಹೆಚ್ಚಿನ ವಿವರ ತಿಳಿಸಿಲ್ಲ. ಟ್ವಿಟರ್‌ನಲ್ಲಿ ‘ಅಸರ್’ ಎಂದಷ್ಟೇ ಉಲ್ಲೇಖಿಸಿದ್ದಾರೆ. ಮಲಾಲಾ ವಿವಾಹವಾಗಿರುವುದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಜನರಲ್ ಮ್ಯಾನೇಜರ್ ‘ಅಸರ್ ಮಲಿಕ್’ ಅವರನ್ನು ಎಂದು ಕೆಲವು ಅಂತರ್ಜಾಲ ತಾಣಗಳು ವರದಿ ಮಾಡಿವೆ.

ಮಲಾಲ ಯೂಸಫ್ ಝಾಯಿ' ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ 'ಸ್ವಾತ್ ಜಿಲ್ಲೆ'ಯ ಮಿಂಗೋರಗ್ರಾಮದ ಒಂದು ಶಾಲೆಯ ವಿದ್ಯಾರ್ಥಿನಿ ಮತ್ತು ಶಿಕ್ಷಣ ಕಾರ್ಯಕರ್ತೆ. ಹೆಣ್ಣುಮಕ್ಕಳು ಶಾಲೆಗೆ ಹೋಗುವುದನ್ನು ತಾಲಿಬಾನ್ ಸಂಘಟನೆಯು ನಿಷೇಧಿಸಿರುವ 'ಸ್ವಾತ್ ಕಣಿವೆ'ಯಲ್ಲಿನ ಹುಡುಗಿಯರ ಶಿಕ್ಷಣ ಮತ್ತು ಮಹಿಳಾ ಹಕ್ಕುಗಳಪರ ತನ್ನ ಕ್ರಿಯಾತ್ಮಕ ಹೋರಾಟಕ್ಕಾಗಿ ಅವರು ಹೆಸರುವಾಸಿಯಾಗಿದ್ದಾರೆ.

ಇವರಿಗೆ 2003ರಲ್ಲಿ ಮಲಾಲ ಸಖರೊವ್ ಪ್ರೈಜ್ ಫಾರ್ ಫ್ರೀಡಮ್ ಆಫ್ ಥಾಟ್(ಯೋಚನೆಯ ಸ್ವಾತಂತ್ರ್ಯಕ್ಕೆ ಸಖರೊವ್ ಪ್ರಶಸ್ತಿ) ದೊರಕಿತು. 9 ಅಕ್ಟೋಬರ್ 2012 ರಂದು  ಒಂದು ಶಾಲಾ ಬಸ್‌ನಲ್ಲಿ ಮನೆಗೆ ಹಿಂದಿರುಗುತ್ತಿರುವಾಗ, ತಾಲಿಬಾನ್ ಬಂದೂಕುಧಾರಿಗಳು ಆಕೆಯನ್ನು ಕೊಲ್ಲುವ ಪ್ರಯತ್ನದಲ್ಲಿ ತಲೆ ಮತ್ತು ಕುತ್ತಿಗೆಗೆ ಗುಂಡು ಹಾರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT