ಡಬ್ಲ್ಯುಹೆಚ್ಒ ಮುಖ್ಯಸ್ಥ 
ವಿದೇಶ

ಸಾಕಷ್ಟು ದೇಶಗಳಲ್ಲಿ ಮೊದಲ ಡೋಸ್ ಲಸಿಕೆಯೇ ದೊರೆತಿಲ್ಲ... ಬೂಸ್ಟರ್‌ ಎಂಬುದು 'ಹಗರಣ': ವಿಶ್ವ ಆರೋಗ್ಯ ಸಂಸ್ಥೆ

ಸಾಕಷ್ಟು ದೇಶಗಳಲ್ಲಿ ಮೊದಲ ಡೋಸ್ ಲಸಿಕೆಯೇ ದೊರೆತಿಲ್ಲ.. ಇಂತಹ ಪರಿಸ್ಥಿತಿಯಲ್ಲಿ ಲಸಿಕೆ ಬೂಸ್ಟರ್‌ ಡೋಸ್ ನೀಡುವಿಕೆ ಸರಿಯಲ್ಲ.. ಅದೊಂದು ಹಗರಣ ಎಂದು ವಿಶ್ವ ಆರೋಗ್ಯ ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ.

ಜಿನಿವಾ: ಸಾಕಷ್ಟು ದೇಶಗಳಲ್ಲಿ ಮೊದಲ ಡೋಸ್ ಲಸಿಕೆಯೇ ದೊರೆತಿಲ್ಲ.. ಇಂತಹ ಪರಿಸ್ಥಿತಿಯಲ್ಲಿ ಲಸಿಕೆ ಬೂಸ್ಟರ್‌ ಡೋಸ್ ನೀಡುವಿಕೆ ಸರಿಯಲ್ಲ.. ಅದೊಂದು ಹಗರಣ ಎಂದು ವಿಶ್ವ ಆರೋಗ್ಯ ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಮಾತನಾಡಿರುವ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮುಖ್ಯಸ್ಥ ಟೆಡ್ರೋಸ್ ಅಧನಾಮ್ ಗೆಬ್ರೆಯೆಸಸ್ ಅವರು, 'ಬಡ ರಾಷ್ಟ್ರಗಳಲ್ಲಿ ನಾಗರಿಕರು ಒಂದೇ ಒಂದು ಡೋಸ್‌ ಲಸಿಕೆ ಪಡೆಯಲೂ ಹೆಣಗಾಡುತ್ತಿರುವ ಸಂದರ್ಭದಲ್ಲಿ ಶ್ರೀಮಂತ ರಾಷ್ಟ್ರಗಳಲ್ಲಿ ಬೂಸ್ಟರ್‌ ಡೋಸ್ ಹೆಸರಿನಲ್ಲಿ ನಡೆಯುತ್ತಿರುವ ಲಸಿಕೆಯ ಅಸಮಾನ ಹಂಚಿಕೆಯು ಸರಿಯಲ್ಲ. ಅದೊಂದು ದೊಡ್ಡ ಹಗರಣ. ಅದು ನಿಲ್ಲಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

'ಲಸಿಕಾ ನೀಡಿಕೆಯಲ್ಲಿ ಉತ್ತಮ ಸ್ಥಿತಿಯಲ್ಲಿರುವ ದೇಶಗಳು ಬೂಸ್ಟರ್ ಡೋಸ್‌ಗಳನ್ನು ನೀಡುತ್ತಿರುವ ಹೊತ್ತಿನಲ್ಲಿ, ಬಡ ದೇಶಗಳು ಲಸಿಕೆಗಾಗಿ ಇನ್ನೂ ಕಾಯುತ್ತಿವೆ. ಕಡಿಮೆ ಆದಾಯದ ದೇಶಗಳಲ್ಲಿ ನಡೆಯುತ್ತಿರುವ ಪ್ರಾಥಮಿಕ ಹಂತದ ಲಸಿಕಾ ಕಾರ್ಯಕ್ರಮಕ್ಕಿಂತಲೂ ಆರು ಪಟ್ಟು ಮಿಗಿಲಾಗಿ ಹಲವು ದೇಶಗಳಲ್ಲಿ ಬೂಸ್ಟರ್‌ ಅಭಿಯಾನ ನಡೆಯುತ್ತಿದೆ. ಇದೊಂದು ಹಗರಣ. ಇದು ನಿಲ್ಲಬೇಕು. ಆರೋಗ್ಯವಂತ ವಯಸ್ಕರಿಗೆ ಬೂಸ್ಟರ್‌ಗಳನ್ನು ನೀಡುವುದು ಸರಿಯಲ್ಲ. ಆರೋಗ್ಯವಂತ ವಯಸ್ಕರಿಗೆ ಬೂಸ್ಟರ್‌ಗಳನ್ನು ನೀಡುವುದರಲ್ಲಿ ಅಥವಾ ಮಕ್ಕಳಿಗೆ ಲಸಿಕೆ ಹಾಕುವುದರಲ್ಲಿ ಅರ್ಥವಿಲ್ಲ. ಆರೋಗ್ಯ ಕಾರ್ಯಕರ್ತರು, ವೃದ್ಧರು ಮತ್ತು ಪ್ರಪಂಚದಾದ್ಯಂತ ಸಂಕಷ್ಟದಲ್ಲಿರುವ ಹಲವು ಗುಂಪುಗಳಿವೆ. ಅವರು ಲಸಿಕೆಗಾಗಿ ಇನ್ನೂ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಲಸಿಕೆಯ ಅಸಮಾನ ವಿತರಣೆಯು ಆಫ್ರಿಕಾ ಖಂಡವನ್ನು ತೀವ್ರವಾಗಿ ಕಾಡಿದೆ. ಅಲ್ಲಿ ಇಡೀ ಖಂಡದ ಜನಸಂಖ್ಯೆಯ ಕೇವಲ ಶೇ.6ರಷ್ಟು ಜನ ಮಾತ್ರ ಕೋವಿಡ್ ಲಸಿಕೆ ಪಡೆದಿದ್ದಾರೆ. ಈ ಹಿಂದೆ ವರ್ಷದ ಅಂತ್ಯದ ವೇಳೆಗೆ ಪ್ರತಿ ದೇಶದ ಜನಸಂಖ್ಯೆಯ ಶೇಕಡಾ 40 ರಷ್ಟು ಮಂದಿಗೆ ವಿಶ್ವ ಆರೋಗ್ಯ ಸಂಸ್ಥೆ ಲಸಿಕೆ ಹಾಕುವ ಗುರಿಯನ್ನು ಹೊಂದಿತ್ತು. ಆದರೆ 100 ಕ್ಕೂ ಹೆಚ್ಚು ದೇಶಗಳು ಪ್ರಸ್ತುತ ಗುರಿಯ ಕೊರತೆಯನ್ನು ಹೊಂದಿವೆ. ದೇಶಗಳ ಜನಸಂಖ್ಯೆಯ ಕನಿಷ್ಠ 20 ಪ್ರತಿಶತದಷ್ಟು ಜನರಿಗೆ ಕೋವಿಡ್ ಲಸಿಕೆ ಡೋಸ್ ಗಳನ್ನು ಒದಗಿಸಲು WHO ನ ಉಪಕ್ರಮವಾದ COVAX ಮೂಲಕ ಕ್ರಮ ಕೈಗೊಳ್ಳಲಾಗಿತ್ತು.

ಆದರೆ ವಿತರಿಸಲು ಸರಿಸುಮಾರು 500 ಮಿಲಿಯನ್ ಡೋಸ್‌ಗಳನ್ನು ಸ್ವೀಕರಿಸದ ಹೊರತು ಆ ಗುರಿ ಸಾಧನೆ ಸಾಧ್ಯವಿಲ್ಲ. ವರದಿಗಳ ಪ್ರಕಾರ ಆಫ್ರಿಕಾದ ಕೇವಲ ಐದು ದೇಶಗಳು ಮೊರಾಕೊ, ಟುನೀಶಿಯಾ ಮತ್ತು ಮಾರಿಷಸ್ ಸೇರಿದಂತೆ ತಮ್ಮ ಜನಸಂಖ್ಯೆಯ ಶೇಕಡಾ 35 ಕ್ಕಿಂತ ಹೆಚ್ಚು ಲಸಿಕೆ ಹಾಕಿವೆ. ಆದರೆ ಹೆಚ್ಚಿನ ಆಫ್ರಿಕನ್ ರಾಷ್ಟ್ರಗಳು ತಮ್ಮ ಜನಸಂಖ್ಯೆಯ ಶೇಕಡಾ 10 ಕ್ಕಿಂತ ಕಡಿಮೆ ಲಸಿಕೆಯನ್ನು ಪಡೆದಿವೆ ಎಂದು WHO ಮುಖ್ಯ ವಿಜ್ಞಾನಿ ಡಾ. ಸೌಮ್ಯಾ ಸ್ವಾಮಿನಾಥನ್ ಹೇಳಿದ್ದರು.  
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT