ಮೃತ ಬಾಲಕ- ಆರೋಪಿಗಳು 
ವಿದೇಶ

ಪಾಕಿಸ್ತಾನದಲ್ಲಿ 11 ವರ್ಷದ ಹಿಂದೂ ಬಾಲಕನ ಮೇಲೆ ಅತ್ಯಾಚಾರ, ಕತ್ತು ಕೊಯ್ದು ಕೊಲೆ: ಇಬ್ಬರ ಬಂಧನ!

ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 11 ವರ್ಷದ ಹಿಂದೂ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 11 ವರ್ಷದ ಹಿಂದೂ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಬಾಲಕನ ಶವ ಖೈರ್‌ಪುರ್ ಮಿರ್ ಪ್ರದೇಶದ ಬಾಬರ್ಲೋಯ್ ಪಟ್ಟಣದಲ್ಲಿನ ಹಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ ಎಂದು ಬಾಲಕನ ಕುಟುಂಬ ಹೇಳಿದೆ. ಘಟನೆ ಕುರಿತು ಬಾಲಕನ ಸೋದರ ಸಂಬಂಧಿ ರಾಜ್‌ಕುಮಾರ್ ಮಾತನಾಡಿ, ನಮ್ಮ ಕುಟುಂಬ ಗುರುನಾನಕ್ ಜಯಂತಿ ಕಾರ್ಯಕ್ರಮಗಳಲ್ಲಿ  ಬಿಡಿವಿಲ್ಲದೆ ತೊಡಗಿಸಿಕೊಂಡಿದ್ದರಿಂದ ಬಾಲಕ ಎಲ್ಲಿದ್ದಾನೆ ಎಂಬುದನ್ನು ತಿಳಿಯಲು ನಮಗೆ ಸಾಧ್ಯವಾಗಿರಲಿಲ್ಲ ಎಂದು ಹೇಳಿದ್ದಾರೆ.

2011ರಲ್ಲಿ ಜನಿಸಿದ್ದ ಬಾಲಕ ಸದ್ಯ ಐದನೇ ತರಗತಿ ಓದುತ್ತಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅಪ್ರಾಪ್ತ ಬಾಲಕನ ದೇಹದ ಮೇಲೆ ಚಿತ್ರಹಿಂಸೆ ನೀಡಿರುವ ಕುರುಹುಗಳು ಕಂಡುಬಂದಿವೆ ಎಂದು ಮಕ್ಕಳ ರಕ್ಷಣಾ ಪ್ರಾಧಿಕಾರ ಜುಬೇರ್ ಮಹೇರ್ ಹೇಳಿದ್ದಾರೆ. ಕಳೆದ ಕೆಲವು ವಾರಗಳಲ್ಲಿ  ಪ್ರಾಂತ್ಯದಲ್ಲಿ ನಡೆದ ಇಂತಹ ಎರಡನೇ ಘಟನೆ ಇದಾಗಿದೆ ಎಂದು ಮಹರ್ ಹೇಳುತ್ತಾರೆ.

ಈ ಸಂಬಂಧ ಬಾಬರ್ಲೋಯ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್(ಎಸ್‌ಎಚ್‌ಒ) ಮಾತನಾಡಿ, ಆರೋಪಿಗಳು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಮುನ್ನ ಕತ್ತು ಕೊಯ್ದು ಹತ್ಯೆ ಮಾಡಿರುವುದಾಗಿ ಹೇಳಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಈ ಪೈಕಿ ಒಬ್ಬ  ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ