ಪಾಕ್ ಗೃಹಸಚಿವ ಶೇಖ್ ರಶೀದ್ 
ವಿದೇಶ

ನಿಷೇಧಿತ ಉಗ್ರ ಸಂಘಟನೆ ಜೊತೆ ಸರ್ಕಾರ ಮಾತುಕತೆ: ಪಾಕ್ ಗೃಹಸಚಿವ ಸಮರ್ಥನೆ

ಅಫ್ಘಾನಿಸ್ತಾನ ತಾಲಿಬಾನಿಗಳ ಸಹಾಯದಿಂದ ಟಿಟಿಪಿ ಸಂಘಟನೆಯೊಂದಿಗೆ ಪಾಕ್ ಸರ್ಕಾರ ಮಾತುಕತೆ ನಡೆಸುತ್ತಿದೆ. ಎಂದು ಪ್ರಧಾನಿ ಇಮ್ರಾನ್ ಖಾನ್ ಈ ಹಿಂದೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

ಇಸ್ಲಾಮಾಬಾದ್: ಪಾಕಿಸ್ತಾನಿ ತಾಲಿಬಾನ್ ಎಂದೇ ಕುಖ್ಯಾತಿ ಪಡೆದಿರುವ ನಿಷೇಧಿತ ಉಗ್ರಸಂಘಟನೆ ಟಿಟಿಪಿ(ತೆಹ್ರೀಕ್  ಇ ತಾಲಿಬಾನ್ ಪಾಕಿಸ್ತಾನ್) ಜೊತೆ ಪಾಕ್ ಸರ್ಕಾರ ಮಾತುಕತೆಯಲ್ಲಿ ನಿರತವಾಗಿರುವುದನ್ನು ಪಾಕ್ ಗೃಹಸಚಿವ ಶೇಖ್ ರಶೀದ್ ಸಮರ್ಥಿಸಿಕೊಂಡಿದ್ದಾರೆ.

ಟಿಟಿಪಿ ಉಗ್ರಗಾಮಿ ಸಂಘಟನೆ ಪಾಕ್- ಆಫ್ಘಾನಿಸ್ತಾನ ಗಡಿಯಲ್ಲಿ ಕಾರ್ಯಾಚಿಸುತ್ತಿದೆ. ಅಫ್ಘಾನಿಸ್ತಾನ ತಾಲಿಬಾನಿಗಳ ಸಹಾಯದಿಂದ ಟಿಟಿಪಿ ಸಂಘಟನೆಯೊಂದಿಗೆ ಪಾಕ್ ಸರ್ಕಾರ ಮಾತುಕತೆ ನಡೆಸುತ್ತಿದೆ. ಇದರಿಂದಾಗಿ ಬಿಕ್ಕಟ್ಟುಗಳು ತಲೆದೋರುವುದಿಲ್ಲ, ಬಗೆಹರಿಯಲಿದೆ ಎಂದು ಪ್ರಧಾನಿ ಇಮ್ರಾನ್ ಖಾನ್ ಈ ಹಿಂದೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

ಇಮ್ರಾನ್ ಖಾನ್ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅದರಲ್ಲೂ ಟಿಟಿಪಿ ಉಗ್ರರ ದಾಳಿಯಲ್ಲಿ ಬಲಿಯಾದವರ ಕುಟುಂಬಗಳು ಇಮ್ರಾನ್ ಖಾನ್ ವಿರುದ್ಧ ಸಿಡಿದೆದ್ದಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT