ವಿದೇಶ

ನೇಪಾಳದಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಉರುಳಿ ಬಿದ್ದು 32 ಮಂದಿ ಸಾವು

Manjula VN

ಕಠ್ಮಂಡು: ನೇಪಾಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ವೊಂದು ಉರುಳಿ ಬಿದ್ದ ಪರಿಣಾಮ 32 ಮಂದಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

ಕಾರ್ಮಿಕರು ಹಾಗೂ ವಿದ್ಯಾರ್ಥಿಗಳನ್ನು ಹೊತ್ತ ಬಸ್ ವೊಂದು ಮುಗು ಜಿಲ್ಲೆಯ ಗಮಗಧಿಗೆ ತೆರಳುತ್ತಿತ್ತು. ಈ ವೇಳೆ ಬಸ್ ಇದ್ದಕ್ಕಿದ್ದಂತೆ ಉರುಳಿ ಬಿದ್ದಿದೆ. 

ವಿಜಯ ದಶಮಿ ಹಬ್ಬ ಆಚರಿಸಲು ದೇಶದ ವಿವಿಧ ಭಾಗಗಳಿಂದ ಮನೆಗೆ ಮರಳುತ್ತಿದ್ದ ಅನೇಕ ಪ್ರಯಾಣಿಕರು ಈ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಇದೀಗ ನೇಪಾಳ ಸೇನೆಯ ಹೆಲಿಕಾಪ್ಟರ್ ಸುರಖೇಟಿನಿಂದ ಅಪಘಾತ ನಡೆದ ಸ್ಥಳ ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. 

ದುರ್ಘಟನೆಯಲ್ಲಿ 22 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಕಳೆದ ರಾತ್ರಿ 12.30ರ ಸುಮಾರಿಗೆ ಘಟನೆ ಸಂಭವಿಸಿದೆ. 22 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೀಗ 10 ಮಂದಿ ಸಾವಿನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಕರ್ಣಾಲಿ ಪ್ರಾಂತ್ಯದ ಪೊಲೀಸ್ ಕಚೇರಿಯ ಇನ್ಸ್‌ಪೆಕ್ಟರ್ ಜೀವನ್ ಲಮಿಚನೆ ಅವರು ಹೇಳಿದ್ದಾರೆ. 

ಘಟನೆ ವೇಳೆ ಬಸ್ ನಲ್ಲಿ 39 ಮಂದಿ ಇದ್ದರು. ಬ್ರೇಕ್ ಫೇಲ್ ನಿಂದ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗುತ್ತಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅದಇಕಾರಿಗಳು ಮಾಹಿತಿ ನೀಡಿದ್ದಾರೆ. 

SCROLL FOR NEXT