ಸಂಗ್ರಹ ಚಿತ್ರ 
ವಿದೇಶ

ಅಫ್ಗಾನ್‌ ಜೈಲಿನಿಂದ ಹೊರಬಂದ ಖೈದಿಗಳು ಐಸಿಸ್‌, ಅಲ್‌ಖೈದಾ ಉಗ್ರ ಸಂಘಟನೆಗೆ ಸೇರ್ಪಡೆ

ತಾಲಿಬಾನ್‌ ಆಡಳಿತದಲ್ಲಿ ಅಫ್ಗಾನ್‌ ಜೈಲಿನಿಂದ ಬಿಡುಗಡೆಗೊಂಡ ಕೈದಿಗಳು ಇಸ್ಲಾಮಿಕ್ ಸ್ಟೇಟ್(ಐಎಸ್‌, ಐಸಿಸ್‌) ಮತ್ತು ಅಲ್-ಖೈದಾ ಭಯೋತ್ಪಾದಕ ಗುಂಪುಗಳನ್ನು ಸೇರಿಕೊಂಡಿದ್ದಾರೆ ಎಂದು ಸಾಮೂಹಿಕ ಭದ್ರತಾ ಒಪ್ಪಂದ ಸಂಸ್ಥೆಯ ಜಂಟಿ ಸಿಬ್ಬಂದಿ ಮುಖ್ಯಸ್ಥ ಅನಾಟೊಲಿ ಸಿಡೊರೊವ್ ಹೇಳಿದ್ದಾರೆ.

ಮಾಸ್ಕೋ: ತಾಲಿಬಾನ್‌ ಆಡಳಿತದಲ್ಲಿ ಅಫ್ಗಾನ್‌ ಜೈಲಿನಿಂದ ಬಿಡುಗಡೆಗೊಂಡ ಕೈದಿಗಳು ಇಸ್ಲಾಮಿಕ್ ಸ್ಟೇಟ್(ಐಎಸ್‌, ಐಸಿಸ್‌) ಮತ್ತು ಅಲ್-ಖೈದಾ ಭಯೋತ್ಪಾದಕ ಗುಂಪುಗಳನ್ನು ಸೇರಿಕೊಂಡಿದ್ದಾರೆ ಎಂದು ಸಾಮೂಹಿಕ ಭದ್ರತಾ ಒಪ್ಪಂದ ಸಂಸ್ಥೆಯ ಜಂಟಿ ಸಿಬ್ಬಂದಿ ಮುಖ್ಯಸ್ಥ ಅನಾಟೊಲಿ ಸಿಡೊರೊವ್ ಹೇಳಿದ್ದಾರೆ.

ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಅಫ್ಘಾನ್ ಕಾರಾಗೃಹಗಳಿಂದ ಬಿಡುಗಡೆಗೊಂಡವರು ಐಸಿಸ್ ಸೇರ್ಪಡೆಗೊಳ್ಳುತ್ತಿರುವುದರ ಜೊತೆಗೆ, ತಾಲಿಬಾನ್‌ ವಿರೋಧಿ ಉಗ್ರರನ್ನು ನೇಮಕ ಮಾಡಿಕೊಳ್ಳುತ್ತಿರುವುದರಿಂದ ಸಂಘಟನೆಗಳು ಬಲಗೊಳ್ಳುತ್ತಿವೆ ಎಂದರು.

ತಾಲಿಬಾನ್ ದೇಶವನ್ನು ಸ್ವಾಧೀನಪಡಿಸಿಕೊಂಡ ನಂತರ 3 ದಶಲಕ್ಷಕ್ಕೂ ಹೆಚ್ಚು ಅಫ್ಘಾನ್ ಜನರು ತಮ್ಮ ದೇಶವನ್ನು ತೊರೆದಿದ್ದು, ಇರಾನ್‌ ಮತ್ತು ಪಾಕಿಸ್ತಾನಕ್ಕೆ ವಲಸೆ ಹೋಗಿದ್ದಾರೆ ಎಂದು ಸಿಡೊರೊವ್ ಮಾಹಿತಿ ನೀಡಿದ್ದಾರೆ.

ತಾಲಿಬಾನಿಗಳು ಅಫ್ಘಾನ್ ಜೈಲಿನಲ್ಲಿದ್ದ ಸಾವಿರಾರು ಖೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಿದ್ದರು. ಇದೀಗ ಅವರೆಲ್ಲಾ ಉಗ್ರ ಸಂಘಟನೆಗಳಿಗೆ ಸೇರ್ಪಡೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!