ಬಾಂಗ್ಲಾ ಪೊಲೀಸರ ಚಿತ್ರ 
ವಿದೇಶ

ಬಾಂಗ್ಲಾದೇಶದಲ್ಲಿ ಕೋಮು ಹಿಂಸಾಚಾರ: 71 ಕೇಸ್ ದಾಖಲು, 450 ಜನರ ಬಂಧನ

ಹಿಂದೂಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ವಿವಿಧ ಕಡೆಗಳಲ್ಲಿ 71 ಕೇಸ್ ಗಳು ದಾಖಲಾಗಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹರಡುತ್ತಿದ್ದ ಹಿನ್ನೆಲೆಯಲ್ಲಿ 450 ಜನರನ್ನು ಬಂಧಿಸಲಾಗಿದೆ.

ಢಾಕಾ: ಹಿಂದೂಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ವಿವಿಧ ಕಡೆಗಳಲ್ಲಿ 71 ಕೇಸ್ ಗಳು ದಾಖಲಾಗಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹರಡುತ್ತಿದ್ದ ಹಿನ್ನೆಲೆಯಲ್ಲಿ 450 ಜನರನ್ನು ಬಂಧಿಸಲಾಗಿದೆ.

ಪೂಜಾ ಸ್ಥಳಗಳು, ದೇವಾಲಯಗಳು, ಹಿಂದೂಗಳ ಮನೆಗಳು ಹಾಗೂ ವಾಣಿಜ್ಯ ಕಟ್ಟಡಗಳ ಮೇಲೆ ಕಳೆದ ಐದು ದಿನಗಳಲ್ಲಿ ನಡೆಸಿದ ದಾಳಿ ಹಾಗೂ ದುರ್ಗಾ ಪೂಜೆ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಡುತ್ತಿದ್ದಕ್ಕೆ 450 ಜನರನ್ನು ಬಂಧಿಸಲಾಗಿದೆ ಎಂದು ಢಾಕಾ ಟ್ರಿಬುನ್ ವರದಿ ಮಾಡಿದೆ. 

ದೇಶದ ವಿವಿಧೆಡೆಗಳಲ್ಲಿ 71 ಕೇಸ್ ಗಳು ದಾಖಲಾವಿಗೆ ಎಂದು ಪೊಲೀಸ್ ಪ್ರಧಾನ ಕಚೇರಿಯ ಸಹಾಯಕ ಇನ್ಸ್‌ಪೆಕ್ಟರ್ ಜನರಲ್ (ಎಐಜಿ) ಎಮ್‌ಡಿ ಕಮರುಜ್ ಮಾನ್ ಸೋಮವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಾರ್ಯಾಚರಣೆ ನಡೆಯುತ್ತಿರುವುದರಿಂದ ಬಂಧನಗಳು ಮತ್ತು ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯಕ್ಕೆ 3,705 ಕೋಟಿ ರೂ. ತೆರಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ..!

ಪೇಸ್‌ಮೇಕರ್‌ ಅಳವಡಿಕೆ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ಆಸ್ಪತ್ರೆಯಿಂದ ಡಿಸ್‌ಚಾರ್ಜ್

Karur stampede: ನಟ ಮತ್ತು ಟಿವಿಕೆ ಅಧ್ಯಕ್ಷ ವಿಜಯ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

Karnataka Rains- ಬೆಂಗಳೂರು ಸೇರಿ ರಾಜ್ಯಾದ್ಯಂತ ಅ.9ರವರೆಗೆ ಮಳೆ

ರಾಹುಲ್ ಒಬ್ಬಂಟಿ ಅಲ್ಲ, ಅವರೊಂದಿಗೆ ಕೋಟ್ಯಾಂತರ ಕಾರ್ಯಕರ್ತರಿದ್ದಾರೆಂಬುದನ್ನು ಕೊಲೆಗಡುಕ ಮನಸ್ಸುಗಳಿಗೆ ತಿಳಿದಿರಲಿ: BJPಗೆ ಸಿಎಂ ಸಿದ್ದರಾಮಯ್ಯ

SCROLL FOR NEXT