ಜಿ-20 ಶೃಂಗಸಭೆ ಆರಂಭ 
ವಿದೇಶ

ಬಡ ದೇಶಗಳಿಗೆ ಹೆಚ್ಚಿನ ಕೋವಿಡ್ ಲಸಿಕೆ ಪೂರೈಕೆ ಕರೆಯೊಂದಿಗೆ ಜಿ-20 ಶೃಂಗಸಭೆ ಆರಂಭ

ಇಟಲಿ ಪ್ರಧಾನಿ ಮಾರಿಯೋ ಡ್ರಾಗಿ ಅವರು ಬಡ ದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪಡೆಯುವಂತಾಗಬೇಕು ಎಂದು ಕರೆ ನೀಡುವ ಮೂಲಕ ವಿಶ್ವದ ಶಕ್ತಿಶಾಲಿ ಆರ್ಥಿಕತೆ ಸಮ್ಮೇಳನ ಜಿ-20 ಶೃಂಗಸಭೆಗೆ ಚಾಲನೆ...

ರೋಮ್: ಇಟಲಿ ಪ್ರಧಾನಿ ಮಾರಿಯೋ ಡ್ರಾಗಿ ಅವರು ಬಡ ದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪಡೆಯುವಂತಾಗಬೇಕು ಎಂದು ಕರೆ ನೀಡುವ ಮೂಲಕ ವಿಶ್ವದ ಶಕ್ತಿಶಾಲಿ ಆರ್ಥಿಕತೆ ಸಮ್ಮೇಳನ ಜಿ-20 ಶೃಂಗಸಭೆಗೆ ಚಾಲನೆ ನೀಡಿದರು.

ಜಾಗತಿಕವಾಗಿ ಕೋವಿಡ್ ಲಸಿಕೆ ಅಂತರ "ನೈತಿಕವಾಗಿ ಸ್ವೀಕಾರಾರ್ಹವಲ್ಲ" ಎಂದಿರುವ ಡ್ರಾಗಿ ಅವರು, ವಿಶ್ವದ ಬಡ ದೇಶಗಳಲ್ಲಿ ಕೇವಲ ಶೇ. 3 ರಷ್ಟು ಜನರು ಮಾತ್ರ ಲಸಿಕೆ ಹಾಕಿಸಿಕೊಂಡಿದ್ದಾರೆ. ಆದರೆ ಶ್ರೀಮಂತ ರಾಷ್ಟ್ರಗಳಲ್ಲಿ ಶೇ. 70 ಜನ ಕನಿಷ್ಠ ಒಂದು ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಕಡಿಮೆ-ಆದಾಯದ ದೇಶಗಳಿಗೆ ಹೆಚ್ಚಿನ ಲಸಿಕೆ ಪೂರೈಸಲು ಸಾಮೂಹಿಕ ಸಹಾಯಕ್ಕಾಗಿ ಶೃಂಗಸಭೆಯ ಮೂಲಕ ಡ್ರಾಗಿ ಕರೆ ನೀಡಿದರು. ಡ್ರಾಗಿ ಅವರು ರೋಮ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ ಜಿ- 20 ಶೃಂಗಸಭೆಯ ಆತಿಥ್ಯ ವಹಿಸಿದ್ದಾರೆ.

ಇಂದಿನ ಶೃಂಗಸಭೆಯಲ್ಲಿ ಹವಾಮಾನ ಬದಲಾವಣೆ, ಜಾಗತಿಕ ಕನಿಷ್ಠ ಕಾರ್ಪೋರೇಟ್ ತೆರಿಗೆ ದರ, ಕೊವಿಡ್​ 19 ಸಾಂಕ್ರಾಮಿಕದಿಂದ ಆರೋಗ್ಯದಲ್ಲಿ ಚೇತರಿಕೆ, ಜಾಗತಿಕ ಅಭಿವೃದ್ಧಿ ಇತ್ಯಾದಿ ವಿಚಾರಗಳನ್ನು ಇಂದು ನಾಯಕರು ವ್ಯಾಪಕವಾಗಿ ಚರ್ಚಿಸಲಿದ್ದಾರೆ. 

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಜಿ-20 ನಾಯಕರ ಫೋಟೋವನ್ನು ಶೇರ್ ಮಾಡಿಕೊಂಡಿದೆ. ಜಾಗತಿಕ ಒಳಿತಿಗಾಗಿ ಇರುವ ಅತಿಮುಖ್ಯವಾದ ವೇದಿಕೆಯಾದ ಜಿ-20 ಸಂಘಟನೆಯ ನಾಯಕರು ಇಂದು ರೋಮ್​​ನಲ್ಲಿ ಭೇಟಿಯಾದರು ಎಂದು ಹೇಳಿದೆ. ಈ ಫೋಟೋದಲ್ಲಿ ಜರ್ಮನಿಯ ಚಾನ್ಸೆಲರ್ ಏಂಜೆಲಾ ಮರ್ಕೆಲ್, ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಯುಕೆ ಪಿಎಂ ಬೋರಿಸ್ ಜಾನ್ಸನ್ ಇತರ ಪ್ರಮುಖ ನಾಯಕರು ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!

ಬೆಂಗಳೂರು: ತಾಜ್‌ ಹೋಟೆಲ್‌ನಲ್ಲಿ ಘೋರ ಕೃತ್ಯ; ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆಗೈದು ತಂದೆ ಆತ್ಮಹತ್ಯೆಗೆ ಯತ್ನ!

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತಬ್ಧ; ನಮ್ಮ ಬೇಡಿಕೆಗಳಿಗೆ ಹೆದರಿ PM ಮೋದಿ, ಅಮಿತ್ ಶಾ ಸದನಕ್ಕೆ ಬರುತ್ತಿಲ್ಲ: ಖರ್ಗೆ

Video: ಬಿಡದಿ ಟೌನ್‌ಶಿಪ್; ಮಧು ಬಂಗಾರಪ್ಪ ಜೊತೆ ಪಿಸುಮಾತು ವಿವಾದ; ಬಿ.ವೈ ವಿಜಯೇಂದ್ರ ಸ್ಪಷ್ಟನೆ