ವಿದೇಶ

ಕಾಬೂಲ್ ನಲ್ಲಿ ಪಾಕಿಸ್ತಾನ ವಿರೋಧಿ ರ್ಯಾಲಿ: ಪ್ರತಿಭಟನಾಕಾರರ ಚದುರಿಸಲು ತಾಲಿಬಾನ್'ನಿಂದ ಗುಂಡಿನ ದಾಳಿ

Manjula VN

ಕಾಬುಲ್: ಅಫ್ಘಾನಿಸ್ತಾನ ರಾಜಧಾನಿ ಕಾಬುಲ್ ನಲ್ಲಿ ಪಾಕಿಸ್ತಾನದ ವಿರುದ್ಧ ರ್ಯಾಲಿ ನಡೆಸಲಾಗುತ್ತಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ತಾಲಿಬಾನ್ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಅಫ್ಘಾನಿಸ್ತಾನ ರಾಷ್ಟ್ರದ ಆಂತರಿಕ ವಿಚಾರದಲ್ಲಿ ಪಾಕಿಸ್ತಾನ ಮೂಗು ತೂರಿಸುತ್ತಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿ ಕಾಬುಲ್ ನಲ್ಲಿ ಪ್ರತಿಭಟನೆ ರ್ಯಾಲಿ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ. 

ಪ್ರತಿಭಟನೆಯಲ್ಲಿ 70 ಮಂದಿ ಜನರು ಭಾಗಿಯಾಗಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವವರ ಪೈಕಿ ಮಹಿಳೆಯರ ಸಂಖ್ಯೆಯೇ ಹೆಚ್ಚಾಗಿದೆ ಎನ್ನಲಾಗುತ್ತಿದೆ. 

ಕಾಬುಲ್ ನಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿ ಬಳಿ ಪ್ರತಿಭಟನೆ ನಡೆಯುತ್ತಿದ್ದು, ಪಾಕ್ ವಿರುದ್ಧ ಪ್ರತಿಭಟನಾಕಾರರು ಬ್ಯಾನರ್ ಹಾಗೂ ಘೋಷಣಾ ವಾಕ್ಯಗಳನ್ನು ಕೂಗುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ತಾಲಿಬಾನ್ ಉಗ್ರರು ಗುಂಡು ಹಾರಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

SCROLL FOR NEXT