ಅಮೆರಿಕಾ ಅಧ್ಯಕ್ಷ ಜೋ ಬೈಡನ್ 
ವಿದೇಶ

ಅಮೆರಿಕಾ 9/11 ದಾಳಿಗೆ 20 ವರ್ಷ: ಮೃತಪಟ್ಟವರನ್ನು ಸ್ಮರಿಸಿ, ಒಗ್ಗಟ್ಟಿನ ಕರೆ ನೀಡಿದ ಅಧ್ಯಕ್ಷ ಬೈಡನ್

ವಿಶ್ವದ ದೊಡ್ಡಣ್ಣ ಅಮೆರಿಕಾದ ಅವಳಿ ಗೋಪುರಗಳ ಮೇಲೆ ದಾಳಿ ನಡೆದು 20 ವರ್ಷಗಳು ಕಳೆದಿದ್ದು, ಈ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರನ್ನು ಸ್ಮರಿಸಿದ್ದಾರೆ.

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕಾದ ಅವಳಿ ಗೋಪುರಗಳ ಮೇಲೆ ದಾಳಿ ನಡೆದು 20 ವರ್ಷಗಳು ಕಳೆದಿದ್ದು, ಈ ಹಿನ್ನೆಲೆಯಲ್ಲಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರನ್ನು ಸ್ಮರಿಸಿದ್ದಾರೆ. 

2001ರ ಸೆಪ್ಪೆಂಬರ್‌ 11ರಂದು ನ್ಯೂಯಾರ್ಕ್‌ ಸಿಟಿ, ಅರ್ಲಿಂಗ್ಟನ್‌, ವರ್ಜಿನಿಯಾ, ಪೆನ್ಸಿಲ್ವೇನಿಯಾ ಮತ್ತು ಶಾಂಕ್ಸ್‌ವಿಲ್ಲೆಯಲ್ಲಿ 90 ದೇಶಗಳ  2,977 ಜನರು ಮೃತಪಟ್ಟಿದ್ದರು. ಸಾವಿರಾರು ಮಂದಿ ಗಾಯಗೊಂಡಿದ್ದರು. ನಿಮ್ಮನ್ನು ಮತ್ತು ನಿಮ್ಮ ಪ್ರೀತಿ ಪಾತ್ರರನ್ನು ಅಮೆರಿಕ ಸ್ಮರಿಸುತ್ತದೆʼ ಎಂದು ಹೇಳಿರುವ ವಿಡಿಯೊವೊಂದನ್ನು ಬೈಡನ್‌ ಅವರು ಸಾಮಾಜಿಕ ಜಾಲತಾಣ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ದುರಂತದಿಂದಾಗಿ ಐಕ್ಯತೆಯು ನಮ್ಮ ದೊಡ್ಡ ಶಕ್ತಿಯಾಗಿದೆ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದ ಅವರು, ದಾಳಿಯ ನಂತರ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಮತ್ತು ಭಯೋತ್ಪಾದಕರ ವಿರುದ್ಧ ಹೋರಾಡಿದ ಭದ್ರತಾ ಪಡೆಗಳನ್ನು ಶ್ಲಾಘಿಸಿದರು.

ದಾಳಿಯ ನಂತರ ರಕ್ಷಣಾ ಕಾರ್ಯದಲ್ಲಿ ತೊಡಗಿದ, ಅಗ್ನಿಶಾಮಕ ದಳದವರು, ಪೊಲೀಸ್ ಅಧಿಕಾರಿಗಳು, ಕಾರ್ಮಿಕರು, ವೈದ್ಯರು ಮತ್ತು ದಾದಿಯರು ಸೇರಿದಂತೆ ಎಲ್ಲರನ್ನೂ ನಾವು ಗೌರವಿಸುತ್ತೇವೆ ಎಂದು ಜೋ ಬೈಡನ್ ತಿಳಿಸಿದ್ದಾರೆ. 

ಅಮೆರಿಕ ಇತಿಹಾಸದಲ್ಲೇ ಈ ದಾಳಿ ಅತ್ಯಂತ ಭೀಕರವಾಗಿದ್ದು, ಸುಮಾರು 102 ನಿಮಿಷಗಳಲ್ಲಿ ಅಲ್​ಖೈದಾ ಭಯೋತ್ಪಾದಕ ಸಂಘಟನೆಯಿಂದ ಅಪಹರಿಸಲ್ಪಟ್ಟಿದ್ದ ಎರಡು ವಿಮಾನಗಳು ಕೇವಲ 102 ನಿಮಿಷಗಳ ಅವಧಿಯಲ್ಲಿ ಅವಳಿ ಗೋಪುರಗಳಿಗೆ ಅಪ್ಪಳಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT