ಭಾರತೀಯ ಯೋಧ 
ವಿದೇಶ

ಕಾಶ್ಮೀರದ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥರ 'ಅನಗತ್ಯ ಟೀಕೆ'ಗೆ ಭಾರತ ಅಸಮಾಧಾನ!

ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥರು ಮಾಡಿದ 'ವಿನಾಕಾರಣ ಟೀಕೆಗಳ' ಬಗ್ಗೆ ಭಾರತ ಅಸಮಾಧಾನ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥರು ಮಾಡಿದ 'ವಿನಾಕಾರಣ ಟೀಕೆಗಳ' ಬಗ್ಗೆ ಭಾರತ ಅಸಮಾಧಾನ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮೀಷನರ್ ಮಿಶೆಲ್ ಬ್ಯಾಚೆಲೆಟ್ ಹೇಳಿಕೆಗಳು ವಾಸ್ತವಿಕತೆಯನ್ನು ಪ್ರತಿಬಿಂಬಿಸುವುದಿಲ್ಲ. ಮಾನವ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಯಾವುದೇ ನ್ಯೂನತೆಗಳನ್ನು ನಿಷ್ಪಕ್ಷಪಾತವಾಗಿ ಪರಿಹರಿಸಬೇಕು. ದೇಶದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಒಳ್ಳೆಯದ್ದು ಎಂದು ಹೇಳಿದೆ. 

ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಆಕೆಯ ಅನಗತ್ಯ ಹೇಳಿಕೆಗಳ ಬಗ್ಗೆ ನಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತೇವೆ. ಇದು ಮೂಲ ವಾಸ್ತವತೆಯನ್ನು ಪ್ರತಿಬಿಂಬಿಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ(ಪಶ್ಚಿಮ) ರೀನಾತ್ ಸಂಧು ಅವರು ಮಾನವ ಹಕ್ಕುಗಳ ಮಂಡಳಿಯ 48ನೇ ಅಧಿವೇಶನದಲ್ಲಿ ಹೈಕಮೀಷನರ್‌ನ ಮೌಖಿಕ ನವೀಕರಣದ ಕುರಿತು ಸಾಮಾನ್ಯ ಚರ್ಚೆ ವೇಳೆ ಭಾರತದ ಹೇಳಿಕೆಯನ್ನು ತಿಳಿಸಿದರು. 

ಜಾಗತಿಕ ಪ್ರಚಾರ ಮತ್ತು ಮಾನವ ಹಕ್ಕುಗಳ ರಕ್ಷಣೆಗೆ ಭಾರತದ ವಿಧಾನವು 'ಬಹುತ್ವ ಮತ್ತು ಅಂತರ್ಗತ ಸಮಾಜ ಮತ್ತು ರೋಮಾಂಚಕ ಪ್ರಜಾಪ್ರಭುತ್ವವಾಗಿ ನಮ್ಮ ಸ್ವಂತ ಅನುಭವ' ದ ಮೇಲೆ ಆಧಾರಿತವಾಗಿದೆ ಎಂದು ಸಂಧು ಹೇಳಿದರು. 

ರಾಜ್ಯಗಳ ನಡುವೆ ಮಾತುಕತೆ, ಸಮಾಲೋಚನೆ ಮತ್ತು ಸಹಕಾರದ ಮೂಲಕ ಮತ್ತು ತಾಂತ್ರಿಕ ನೆರವು ಮತ್ತು ಸಾಮರ್ಥ್ಯ ವೃದ್ಧಿಯ ಮೂಲಕ ಮಾನವ ಹಕ್ಕುಗಳ ಪ್ರಚಾರ ಮತ್ತು ರಕ್ಷಣೆಯನ್ನು ಉತ್ತಮವಾಗಿ ಅನುಸರಿಸಲಾಗುತ್ತದೆ ಎಂದು ಭಾರತ ನಂಬುತ್ತದೆ ಎಂದು ಹೇಳಿದರು. 

'ಮಾನವ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಯಾವುದೇ ನ್ಯೂನತೆಗಳನ್ನು ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ ಪರಿಹರಿಸಬೇಕು. ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ರಾಜ್ಯಗಳ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಗೌರವಿಸಬೇಕು' ಎಂದು ಸಂಧು ಹೇಳಿದರು.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮೀಷನರ್ ಮಿಶೆಲ್ ಬ್ಯಾಚೆಲೆಟ್ ಸೋಮವಾರ, ಭಾರತವು ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆ ಬಳಕೆ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಾಗ್ಗೆ ಸಂವಹನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವುದು ಬಗ್ಗೆ ಚಿಂತಿಸುವಂತಾಗಿದೆ ಎಂದಿದ್ದರು.

ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 48ನೇ ಅಧಿವೇಶನದ ತಮ್ಮ ಆರಂಭಿಕ ಹೇಳಿಕೆಯಲ್ಲಿ ಬ್ಯಾಚೆಲೆಟ್, ಭಯೋತ್ಪಾದನೆಯನ್ನು ಎದುರಿಸಲು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ಉತ್ತೇಜಿಸಲು ಭಾರತೀಯ ಸರ್ಕಾರದ ಪ್ರಯತ್ನಗಳು ಸರಿ ಇವೆ. ಆದರೆ ಅಂತಹ 'ನಿರ್ಬಂಧಿತ' ಕ್ರಮಗಳು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಬಹುದು ಮತ್ತು ಮತ್ತಷ್ಟು ಉದ್ವಿಗ್ನತೆಯನ್ನು ಉಂಟುಮಾಡಬಹುದು ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT