ತಾಲಿಬಾನ್ ನಾಯಕರು 
ವಿದೇಶ

ಅಫ್ಘಾನಿಸ್ತಾನದಲ್ಲಿ ಮಾಧ್ಯಮಿಕ ಶಾಲೆಗೆ ಬಾಲಕಿಯರಿಗೆ, ಶಿಕ್ಷಕಿಯರಿಗೆ ಪ್ರವೇಶವಿಲ್ಲ, ಮಹಿಳಾ ಸಚಿವಾಲಯ ಬಂದ್

ಅಫ್ಘಾನಿಸ್ತಾನದ ಹೊಸ ತಾಲಿಬಾನ್ ಸರ್ಕಾರ ಮಾಧ್ಯಮಿಕ ಶಾಲೆಗಳನ್ನು ಪುನಾರಂಭ ಮಾಡಿದ್ದು, ವಿದ್ಯಾರ್ಥಿಗಳು(ಗಂಡು ಮಕ್ಕಳು) ಶಿಕ್ಷಕರು ಮಾತ್ರ ಶಾಲೆಗೆ ಹಾಜರಾಗುವಂತೆ ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ. 

ಕಾಬೂಲ್: ಅಫ್ಘಾನಿಸ್ತಾನದ ಹೊಸ ತಾಲಿಬಾನ್ ಸರ್ಕಾರ ಮಾಧ್ಯಮಿಕ ಶಾಲೆಗಳನ್ನು ಪುನಾರಂಭ ಮಾಡಿದ್ದು, ವಿದ್ಯಾರ್ಥಿಗಳು(ಗಂಡು ಮಕ್ಕಳು) ಶಿಕ್ಷಕರು ಮಾತ್ರ ಶಾಲೆಗೆ ಹಾಜರಾಗುವಂತೆ ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ. 

ಶನಿವಾರದಿಂದಲೇ ಹುಡುಗರು ಮತ್ತು ಪುರುಷ ಶಿಕ್ಷಕರನ್ನು ಮಾತ್ರ ತರಗತಿಗೆ ಹಿಂತಿರುಗುವಂತೆ ತಾಬಿಲಾನ್ ಸರ್ಕಾರ ಸೂಚನೆ ನೀಡಿದೆ. ಅಫ್ಘಾನಿಸ್ತಾನದಲ್ಲಿ ಬಾಲಕಿಯರನ್ನು ಮಾಧ್ಯಮಿಕ ಶಾಲೆಗೆ ಮರಳುವುದರಿಂದ ಹೊರಗಿಡಲಾಗಿದೆ. 

ಕಠಿಣವಾದ ಇಸ್ಲಾಮಿಸ್ಟ್ ಗುಂಪು ಕಳೆದ ತಿಂಗಳು ಅಮೆರಿಕ ಬೆಂಬಲಿತ ಸರ್ಕಾರ ಕಿತ್ತುಹಾಕಿ ತಾಲಿಬಾನ್ ಅಧಿಕಾರಕ್ಕೆ ಬಂದಿದೆ. 1990ರ ದಶಕದಲ್ಲಿ ಮಹಿಳೆಯರಿಗೆ ಹೆಚ್ಚಾಗಿ ಶಿಕ್ಷಣ ಮತ್ತು ಕೆಲಸಕ್ಕೆ ನಿಷೇಧ ವಿಧಿಸಿದ್ದ ತಾಲಿಬಾನ್ ಈ ಬಾರಿ ಮಹಿಳೆಯರ ಬಗ್ಗೆ ಮೃದುವಾಗಿರುವುದಾಗಿ ಹೇಳಿಕೊಂಡಿತ್ತು. ಆದರೆ ತಾಲಿಬಾನ್ ಸರ್ಕಾರದ ಈ ಹೊಸ ಆದೇಶವು ಮಹಿಳಾ ಹಕ್ಕುಗಳಿಗೆ ಧಕ್ಕೆ ತರುವ ಹೊಸ ಸರ್ಕಾರದ ಇತ್ತೀಚಿನ ಕ್ರಮವಾಗಿದೆ.

"ಎಲ್ಲಾ ಪುರುಷ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳಿಗೆ ಹಾಜರಾಗಬೇಕು" ಎಂದು ಆದೇಶದಲ್ಲಿ ತಿಳಿಸಲಾಗಿದೆ.
 ಆದರೆ ಈ ಆದೇಶದಲ್ಲಿ ಮಹಿಳಾ ಶಿಕ್ಷಕರು ಅಥವಾ ಬಾಲಕಿಯರ ಬಗ್ಗೆ ಯಾವುದೇ ಉಲ್ಲೇಖವಿಲ್ಲ. 

ಮಾಧ್ಯಮಿಕ ಶಾಲೆಗಳು, ಸಾಮಾನ್ಯವಾಗಿ 13 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳನ್ನು ಒಳಗೊಂಡಿರುತ್ತದೆ.

ತಾಲಿಬಾನ್ ಸರ್ಕಾರ ಮಹಿಳಾ ವ್ಯವಹಾರಗಳ ಸಚಿವಾಲಯವನ್ನು ಸ್ಥಗಿತಗೊಳಿಸಿದ್ದು, ಅದನ್ನು ತಮ್ಮ ಮೊದಲ ಆಳ್ವಿಕೆಯಲ್ಲಿ ಜಾರಿಯಲ್ಲಿದ್ದ ಕಟ್ಟುನಿಟ್ಟಾದ ಧಾರ್ಮಿಕ ಸಿದ್ಧಾಂತವನ್ನು ಜಾರಿಗೊಳಿಸುವ ಇಲಾಖೆಯನ್ನಾಗಿ ಬದಲಾಯಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT