ಜಬಿಹುಲ್ಲಾ ಮುಜಾಹಿದ್ 
ವಿದೇಶ

ಅಫ್ಘಾನಿಸ್ತಾನದಲ್ಲಿ ಹೆಣ್ಣು ಮಕ್ಕಳು 'ಆದಷ್ಟು ಬೇಗ' ಶಾಲೆಗೆ ಮರಳಲು ಅವಕಾಶ: ತಾಲಿಬಾನ್

ಅಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳು ಆದಷ್ಟು ಬೇಗ ಶಾಲೆಗೆ ಮರಳಲು ಅವಕಾಶ ನೀಡಲಾಗುವುದು ಎಂದು ತಾಲಿಬಾನ್ ಮಂಗಳವಾರ ತನ್ನ ಎಲ್ಲ ಪುರುಷ ಸಂಪುಟದಲ್ಲಿ ಉಳಿದ ಸ್ಥಾನಗಳನ್ನು ಘೋಷಿಸಿದ ನಂತರ ಹೇಳಿದೆ.

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳು ಆದಷ್ಟು ಬೇಗ ಶಾಲೆಗೆ ಮರಳಲು ಅವಕಾಶ ನೀಡಲಾಗುವುದು ಎಂದು ತಾಲಿಬಾನ್ ಮಂಗಳವಾರ ತನ್ನ ಎಲ್ಲ ಪುರುಷ ಸಂಪುಟದಲ್ಲಿ ಉಳಿದ ಸ್ಥಾನಗಳನ್ನು ಘೋಷಿಸಿದ ನಂತರ ಹೇಳಿದೆ.

"ನಾವು ಈ ವಿಚಾರವನ್ನು ಅಂತಿಮಗೊಳಿಸುತ್ತಿದ್ದೇವೆ... ಅದು ಆದಷ್ಟು ಬೇಗ ಹೆಣ್ಣು ಮಕ್ಕಳು ಶಾಲೆಗೆ ಮರಳಲು ಅವಕಾಶ ನೀಡಲಾಗುವುದು" ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಬಾಲಕಿಯರ ಶಿಕ್ಷಣದ ಕುರಿತ ಪ್ರಶ್ನೆಗೆ ಉತ್ತರಿಸಿದ್ದಾರೆ. ಆದರೆ ಮಹಿಳಾ ವ್ಯವಹಾರಗಳ ಸಚಿವಾಲಯ ಬಂದ್ ಮಾಡಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮುಜಾಹಿದ್ ನಿರಾಕರಿಸಿದ್ದಾರೆ.

ಶಿಕ್ಷಣ ಸಚಿವಾಲಯವು ಕಳೆದ ವಾರಾಂತ್ಯದಲ್ಲಿ ಮಾಧ್ಯಮಿಕ ಶಾಲೆಯ ಪುರುಷ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಶಾಲೆಗೆ ಮರಳುವಂತೆ ಆದೇಶಿಸಿತ್ತು. ಆದರೆ ದೇಶದ ಮಹಿಳಾ ಶಿಕ್ಷಕರು ಮತ್ತು ಬಾಲಕಿಯರ ಬಗ್ಗೆ ಯಾವುದೇ ಉಲ್ಲೇಖ ಮಾಡಿರಲಿಲ್ಲ.

ಇನ್ನು ತಾಲಿಬಾನ್ ಸರ್ಕಾರ ಮಹಿಳಾ ವ್ಯವಹಾರಗಳ ಸಚಿವಾಲಯವನ್ನು ಸ್ಥಗಿತಗೊಳಿಸಿದ್ದು, ಅದನ್ನು ತಮ್ಮ ಮೊದಲ ಆಳ್ವಿಕೆಯಲ್ಲಿ ಜಾರಿಯಲ್ಲಿದ್ದ ಕಟ್ಟುನಿಟ್ಟಾದ ಧಾರ್ಮಿಕ ಸಿದ್ಧಾಂತವನ್ನು ಜಾರಿಗೊಳಿಸುವ ಇಲಾಖೆಯನ್ನಾಗಿ ಬದಲಾಯಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Yamuna Expressway ದುರಂತ: ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ: ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!

ಕಾವೇರಿ ಜಲ ವಿವಾದ: ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಶಾಕ್; CWMA ಆದೇಶ ಪಾಲಿಸುವಂತೆ ಸೂಚನೆ, ಅ.12ಕ್ಕೆ ವಿಚಾರಣೆ ಮುಂದೂಡಿಕೆ..!

ಮೈಸೂರು ದಸರಾ: ಜಿಲ್ಲಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಡಿಸಿಎಂ ತವರು ತುಮಕೂರಿಗೆ ಅವಕಾಶವೇ ಇಲ್ಲ; ಭುಗಿಲೆದ್ದ ಆಕ್ರೋಶ!

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ

ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿಯಾಗುತ್ತಿದ್ದಂತೆ Xi Jinping ಶಾಂತಿ ಮಂತ್ರ; US-China ನಡುವೆ ಶುರುವಾಯ್ತಾ ಹೊಸ ಸ್ನೇಹ ಪರ್ವ?