ವಿದೇಶ

ನ್ಯೂಯಾರ್ಕ್ ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ: ಇಂದು ಸಂಜೆ ವಿಶ್ವಸಂಸ್ಥೆ ಸಾಮಾನ್ಯ ಸಭೆ ಉದ್ದೇಶಿಸಿ ಭಾಷಣ 

Sumana Upadhyaya

ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ನ್ಯೂಯಾರ್ಕ್ ಗೆ ಬಂದಿಳಿದಿದ್ದಾರೆ.ಶನಿವಾರ ಸಂಜೆ 6.30ಕ್ಕೆ ಅಲ್ಲಿ ಅವರು 76ನೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಸದಸ್ಯತ್ವ ಹೆಚ್ಚಿನ ಮಹತ್ವ ಪಡೆದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ತಿಳಿಸಿದ್ದಾರೆ.

ಕಳೆದ ಎರಡು ದಿನಗಳ ಕಾಲ ಸತತ ಸಭೆಗಳು, ಮಾತುಕತೆಯಲ್ಲಿ ತೊಡಗಿದ್ದ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಭಾರತೀಯ ಸ್ಥಳೀಯ ಕಾಲಮಾನದ ಪ್ರಕಾರ ನ್ಯೂಯಾರ್ಕ್ ಗೆ ತೆರಳಿದ್ದಾರೆ. ಕಳೆದ ಬುಧವಾರ ಮೂರು ದಿನಗಳ ಅಮೆರಿಕ ಭೇಟಿಗಾಗಿ ಪ್ರಧಾನಿ ಮೋದಿ ಇಲ್ಲಿಗೆ ಬಂದಿದ್ದರು.

ನಿನ್ನೆ ಅಮೆರಿಕ ಅಧ್ಯಕ್ಷ ಜೊ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ಟ್ ಮಾರ್ರಿಸನ್ ಮತ್ತು ಜಪಾನ್ ಪ್ರಧಾನಿ ಯೊಶಿಹಿಡೆ ಸುಗ ಅವರೊಂದಿಗೆ ಸಹ ಮಾತುಕತೆ ನಡೆಸಿದ್ದಾರೆ. ನಂತರ ವೈಯಕ್ತಿಕವಾಗಿ ಕ್ವಾಡ್ ಶೃಂಗಸಭೆಯಲ್ಲಿ ಕೂಡ ಭಾಗವಹಿಸಲಿದ್ದಾರೆ.

ಭಾರತದಲ್ಲಿ ಹೂಡಿಕೆಯನ್ನು ಆಕರ್ಷಿಸಲು 5 ಜಾಗತಿಕ ಸಿಇಒಗಳ ಜೊತೆ ಕೂಡ ಮಾತುಕತೆ ನಡೆಸಿದ್ದಾರೆ. ಇಂದು ತಮ್ಮ ಅಮೆರಿಕ ಭೇಟಿಯನ್ನು ಮುಕ್ತಾಯಗೊಳಿಸಲಿರುವ ಪ್ರಧಾನಿ ಮೋದಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದರಲ್ಲಿ ಮುಖ್ಯವಾಗಿ ಕೋವಿಡ್-19 ಜಾಗತಿಕ ಸಮಸ್ಯೆ ಬಗ್ಗೆ ಚರ್ಚೆ ನಡೆಯಲಿದೆ.ಅಲ್ಲದೆ ಭಯೋತ್ಪಾದನೆಯ ನಿಗ್ರಹ, ಹವಾಮಾನ ಬದಲಾವಣೆ ಮತ್ತು ಇತರ ಮುಖ್ಯವಾದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.

ಈ ವರ್ಷದ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಚರ್ಚೆಯ ವಿಷಯ ಕೋವಿಡ್-19ನಿಂದ ಚೇತರಿಸಿಕೊಳ್ಳಲು, ಸಮರ್ಥನೀಯವಾಗಿ ಪುನರ್ನಿರ್ಮಾಣ, ಭೂಮಿಯ ಅಗತ್ಯಗಳಿಗೆ ಸ್ಪಂದಿಸಲು, ಜನರ ಹಕ್ಕುಗಳನ್ನು ಗೌರವಿಸಲು ಮತ್ತು ವಿಶ್ವಸಂಸ್ಥೆಯನ್ನು ಪುನರುಜ್ಜೀವನಗೊಳಿಸುವ ಭರವಸೆಯ ಮೂಲಕ ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು ಎಂಬುದಾಗಿದೆ.

SCROLL FOR NEXT