ಸಾಂದರ್ಭಿಕ ಚಿತ್ರ 
ವಿದೇಶ

ಕೆನಡಾ: ಭಾರತೀಯ ಮೂಲದ ಸಿಖ್ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ

ಕೆನಡಾದ ಅಲ್ಬರ್ಟಾ ಪ್ರಾಂತ್ಯದಲ್ಲಿ 24 ವರ್ಷದ ಭಾರತೀಯ ಮೂಲದ ಸಿಖ್ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ತಿಂಗಳಲ್ಲಿ ಕೆನಡಾದಲ್ಲಿ ನಡೆದ ಎರಡನೇ ಘಟನೆಯಾಗಿದೆ.

ಅಲ್ಬರ್ಟಾ: ಕೆನಡಾದ ಅಲ್ಬರ್ಟಾ ಪ್ರಾಂತ್ಯದಲ್ಲಿ 24 ವರ್ಷದ ಭಾರತೀಯ ಮೂಲದ ಸಿಖ್ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ತಿಂಗಳಲ್ಲಿ ಕೆನಡಾದಲ್ಲಿ ನಡೆದ ಎರಡನೇ ಘಟನೆಯಾಗಿದೆ.

ಹತ್ಯೆಯಾದ ಸಿಖ್ ವ್ಯಕ್ತಿ ಸಂರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಪೊಲೀಸರು ಡಿಸೆಂಬರ್ 3 ರ ರಾತ್ರಿ ಈ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಎಡ್ಮಂಟನ್ ಪೊಲೀಸ್ ಪ್ರಕಟಣೆ ತಿಳಿಸಿದೆ.

ಪೊಲೀಸರ ಪ್ರಕಾರ, ಗುಂಡಿನ ದಾಳಿ ನಡೆಸಿದ ಬಳಿಕ ಶಂಕಿತರ ವಾಹನ ಈ ಪ್ರದೇಶವನ್ನು ಬಿಟ್ಟು ಹೋಗುತ್ತಿರುವುದು ಕಂಡುಬಂದಿದೆ ಮತ್ತು ಅದರ ಫೋಟೋಗಳನ್ನು ತನಿಖಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ಡಿಸೆಂಬರ್ 3 ರ ರಾತ್ರಿ ನಡೆದ ಯಾವುದೇ ಅನುಮಾನಾಸ್ಪದ ಚಟುವಟಿಕೆಯ ಬಗ್ಗೆ ತಮ್ಮ ಸಿಸಿಟಿವಿ ಕ್ಯಾಮೆರಾಗಳು ಅಥವಾ ಡ್ಯಾಶ್‌ಕ್ಯಾಮ್ ದೃಶ್ಯಗಳನ್ನು ಪರಿಶೀಲಿಸುವಂತೆ ನಿವಾಸಿಗಳಿಗೆ ಸೂಚಿಸಲಾಗಿದೆ.

ಒಂಟಾರಿಯೊ ಪ್ರಾಂತ್ಯದಲ್ಲಿ ಕಳೆದ ಡಿಸೆಂಬರ್ 3 ರಂದು ನಡೆದ 'ಉದ್ದೇಶಿತ' ದಾಳಿಯಲ್ಲಿ 21 ವರ್ಷದ ಸಿಖ್ ಮಹಿಳೆ ಪವನ್‌ಪ್ರೀತ್ ಕೌರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

'ಅಶ್ಲೀಲ, ಅಸಭ್ಯ, ವಿಕೃತಿ': TVK ಮಹಿಳಾ ಅಭ್ಯರ್ಥಿ ಕುರಿತ ಸ್ಟಾಲಿನ್ ಹೇಳಿ ಖಂಡಿಸಿದ CM ವಿಜಯ್; ಚುನಾವಣಾ ಆಯೋಗಕ್ಕೆ ದೂರು

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video