ನೀರವ್ ಮೋದಿ 
ವಿದೇಶ

ಭಾರತಕ್ಕೆ ಹಸ್ತಾಂತರ: ಮೇಲ್ಮನವಿ ಸಲ್ಲಿಸಲು ನೀರವ್ ಮೋದಿಗೆ ಅನುಮತಿ ನಿರಾಕರಿಸಿದ ಲಂಡನ್ ಹೈಕೋರ್ಟ್

ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‌ಬಿ)ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಬ್ರಿಟನ್ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದೆ.

ಲಂಡನ್‌: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‌ಬಿ)ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಬ್ರಿಟನ್ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದೆ.

ಭಾರತಕ್ಕೆ ಹಸ್ತಾಂತರಿಸುವಂತೆ ಆದೇಶಿಸಿದ ಲಂಡನ್‌ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ನೀರವ್ ಮೋದಿ ಸಲ್ಲಿಸಿದ್ದ ಮನವಿಯನ್ನು ಗುರುವಾರ ಹೈಕೋರ್ಟ್‌ ತಿರಸ್ಕರಿಸಿದೆ.

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿ ನೀರವ್ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಲಂಡನ್‌ನ (ಹೈಕೋರ್ಟ್)ರಾಯಲ್ ಕೋರ್ಟ್ಸ್ ಆಫ್ ಜಸ್ಟಿಸ್‌ನ ಲಾರ್ಡ್ ಜಸ್ಟೀಸ್ ಜೆರೆಮಿ ಸ್ಟುವರ್ಟ್-ಸ್ಮಿತ್ ಮತ್ತು ನ್ಯಾಯಮೂರ್ತಿ ರಾಬರ್ಟ್ ಜೇ ಅವರುತೀರ್ಪು ಪ್ರಕಟಿಸಿದ್ದಾರೆ.

ಆಗ್ನೇಯ ಲಂಡನ್‌ನ ವಾಂಡ್ಸ್‌ವರ್ತ್ ಜೈಲಿನಲ್ಲಿರುವ 51 ವರ್ಷದ ಉದ್ಯಮಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಕಳೆದ ಫೆಬ್ರವರಿಯಲ್ಲಿ ವೆಸ್ಟ್‌ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶಿಸಿತ್ತು. ಈ ತೀರ್ಪಿನ ವಿರುದ್ಧ ನೀರವ್ ಮೋದಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಯುಕೆ ಹೈಕೋರ್ಟ್ ವಜಾಗೊಳಿಸಿದೆ.

ನೀರವ್ ಮೋದಿ ಅವರ ಮಾನಸಿಕ ಸ್ಥಿತಿಯ ಬಗ್ಗೆ ನಾವು ಸಾಕಷ್ಟು ತೃಪ್ತಿ ಹೊಂದಿದ್ದೇವೆ. ಅವರನ್ನು ಗಡಿಪಾರು ಮಾಡುವುದು ಅನ್ಯಾಯ ಅಥವಾ ದಬ್ಬಾಳಿಕೆಯಾಗುತ್ತದೆ ಎನ್ನುವುದಕ್ಕೆ ಯಾವುದೇ ಪೂರಕ ಅಂಶಗಳಿಲ್ಲ ಎಂದು ಹೈಕೋರ್ಟ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ