ಸಾಂದರ್ಭಿಕ ಚಿತ್ರ 
ವಿದೇಶ

ಲಂಡನ್: ಮನೆಯೊಂದರಲ್ಲಿ ಕೇರಳ ಮೂಲದ ನರ್ಸ್, ಇಬ್ಬರು ಮಕ್ಕಳ ಸಾವು!

ಉದ್ಯೋಗವನ್ನರಸಿ ಲಂಡನ್ ಗೆ ತೆರಳಿದ್ದ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಶುಕ್ರವಾರ ಬೆಳಕಿಗ ಬಂದಿದೆ.

ಲಂಡನ್: ಉದ್ಯೋಗವನ್ನರಸಿ ಲಂಡನ್ ಗೆ ತೆರಳಿದ್ದ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಶುಕ್ರವಾರ ಬೆಳಕಿಗ ಬಂದಿದೆ.

ಪೂರ್ವ ಇಂಗ್ಲೆಂಡ್‌ನ ನಾರ್ಥಾಂಪ್ಟನ್ ಪ್ರದೇಶದಲ್ಲಿ ಭಾರತೀಯ ಮೂಲದ ಮಹಿಳೆ ಮತ್ತು ಅವರ ಇಬ್ಬರು ಚಿಕ್ಕ ಮಕ್ಕಳು ತಮ್ಮ ಮನೆಯಲ್ಲಿ ಗಂಭೀರವಾದ ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಪ್ರಸ್ತುತ ಲಂಡನ್ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಕೇರಳದ ಕೊಟ್ಟಾಯಂನ 40 ವರ್ಷದ ಮಲಯಾಳಿ ನರ್ಸ್ ಎಂದು ಗುರುತಿಸಲಾದ ಮಹಿಳೆ ಮತ್ತು ಅವರ ಆರು ವರ್ಷದ ಮಗ ಮತ್ತು ನಾಲ್ಕು ವರ್ಷದ ಮಗಳು ಕೆಟ್ಟರಿಂಗ್ ಪಟ್ಟಣದ ತಮ್ಮ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಹಿಳೆಯ ಪತಿ ಎಂದು ನಂಬಲಾದ 52 ವರ್ಷದ ವ್ಯಕ್ತಿಯನ್ನು ಕೊಲೆ ಶಂಕೆಯ ಮೇಲೆ ಬಂಧಿಸಲಾಗಿದೆ ಮತ್ತು ಪೊಲೀಸ್ ಕಸ್ಟಡಿಯಲ್ಲಿ ಉಳಿಸಿಕೊಳ್ಳಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸೂಪರಿಂಟೆಂಡೆಂಟ್ ಸ್ಟೀವ್ ಫ್ರೀಮನ್ ಅವರು, 'ಪ್ರಕರಣವನ್ನು ಲಂಡನ್ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಮೃತ ಮಹಿಳೆ ಮತ್ತು ಇಬ್ಬರು ಮಕ್ಕಳಿಗೆ ನ್ಯಾಯ ಒದಗಿಸಲು ಸಂಪೂರ್ಣ ಪ್ರಯತ್ನಪಡುತ್ತೇವೆ ಎಂದು ನಾನು ಸಾರ್ವಜನಿಕರಿಗೆ ಭರವಸೆ ನೀಡಲು ಬಯಸುತ್ತೇನೆ ಎಂದು ನಾರ್ಥಾಂಪ್ಟನ್‌ಶೈರ್ ಸ್ಥಳೀಯ ಪೋಲೀಸಿಂಗ್ ಏರಿಯಾ ಕಮಾಂಡರ್ ಕೂಡ ಆಗಿರುವ ಸೂಪರಿಂಟೆಂಡೆಂಟ್ ಸ್ಟೀವ್ ಫ್ರೀಮನ್ ಹೇಳಿದ್ದಾರೆ.

ಸಾವಿನ ಕಾರಣವನ್ನು ಸ್ಥಾಪಿಸಲು ವಿಧಿವಿಜ್ಞಾನ ಮರಣೋತ್ತರ ಪರೀಕ್ಷೆಗಳು ಮುಂದಿನ ದಿನಗಳಲ್ಲಿ ನಡೆಯಲಿದ್ದು, ಬಳಿಕ ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗುತ್ತದೆ ಎಂದು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT