ಸಂಗ್ರಹ ಚಿತ್ರ 
ವಿದೇಶ

ನಿರಂತರ ಉಗ್ರ ದಾಳಿಗಳಿಂದ ಪತರಗುಟ್ಟಿದೆ ಪಾಕ್: ಭಯೋತ್ಪಾದಕರ ದಾಳಿಯಲ್ಲಿ ನಾಲ್ವರು ಪೊಲೀಸರ ಸಾವು!

ಭಯೋತ್ಪಾದನೆ ಪೋಷಿತ ಪಾಕಿಸ್ತಾನದಲ್ಲಿ ಇದೀಗ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿವೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಹೊಸದಾಗಿ ನಿರ್ಮಿಸಲಾದ ಪೊಲೀಸ್ ಠಾಣೆಯ ಮೇಲೆ ಭಯೋತ್ಪಾದಕರು ದಾಳಿ ಮಾಡಿದೆ.

ಪೇಶಾವರ: ಭಯೋತ್ಪಾದನೆ ಪೋಷಿತ ಪಾಕಿಸ್ತಾನದಲ್ಲಿ ಇದೀಗ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿವೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಹೊಸದಾಗಿ ನಿರ್ಮಿಸಲಾದ ಪೊಲೀಸ್ ಠಾಣೆಯ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದು ದಾಳಿಯಲ್ಲಿ ಕನಿಷ್ಠ ನಾಲ್ವರು ಪಾಕಿಸ್ತಾನಿ ಪೊಲೀಸರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ.

ದಕ್ಷಿಣ ವಜಿರಿಸ್ತಾನ್ ಬುಡಕಟ್ಟು ಜಿಲ್ಲೆಯ ಗಡಿಯಲ್ಲಿರುವ ಲಕಿ ಮಾರ್ವಾಟ್‌ನಲ್ಲಿರುವ ಬರ್ಗೈ ಪೊಲೀಸ್ ಠಾಣೆಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇನ್ನು ದಾಳಿಯಲ್ಲಿ ಉಗ್ರರು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ರಾಕೆಟ್ ಲಾಂಚರ್‌ಗಳ ಬಳಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಮುಖ್ಯಮಂತ್ರಿ ಮೆಹಮೂದ್ ಖಾನ್ ದಾಳಿಯನ್ನು ಹೇಡಿತನದ ಕೃತ್ಯ ಎಂದು ಬಣ್ಣಿಸಿದ್ದಾರೆ ಮತ್ತು ಪ್ರಾಂತೀಯ ಪೊಲೀಸ್ ಮುಖ್ಯಸ್ಥರಿಂದ ತಕ್ಷಣದ ವರದಿಯನ್ನು ಕೇಳಿದ್ದಾರೆ.

ಅಧ್ಯಕ್ಷ ಆರಿಫ್ ಅಲ್ವಿ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಇನ್ನು ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವವರೆಗೂ ನಮ್ಮ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ದಾಳಿಯನ್ನು ಖಂಡಿಸಿದರು.

ಇನ್ನು ದಾಳಿಯ ಹೊಣೆ ಸದ್ಯಕ್ಕೆ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ ಜಿಲ್ಲೆಯಲ್ಲಿ ಪೊಲೀಸರ ಮೇಲಿನ ಹಿಂದಿನ ದಾಳಿಗಳನ್ನು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್(ಟಿಟಿಪಿ) ಹೊತ್ತುಕೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel