ಸಾಂದರ್ಭಿಕ ಚಿತ್ರ 
ವಿದೇಶ

ಪಾಕಿಸ್ತಾನದಲ್ಲಿ ವಿದ್ಯುತ್ ಬಿಕ್ಕಟ್ಟು: ರಾತ್ರಿ 8 ಗಂಟೆಗೆ ಮಾರುಕಟ್ಟೆ ಗಳು ಬಂದ್, ಮದುವೆಗಳಿಗೂ ನಿರ್ಬಂಧ ಸಾಧ್ಯತೆ

ಪಾಕಿಸ್ತಾನ ಜನತೆಗೆ ಅಧಿಕ ಹಣದುಬ್ಬರ ಹಾಗೂ ಬೆಲೆ ಏರಿಕೆ ಬಿಸಿಯ ಮಧ್ಯೆ ಈಗ ಕರೆಂಟ್ ಶಾಕ್ ನೀಡಲಾಗಿದ್ದು, ವಿದ್ಯುತ್ ಬಿಕ್ಕಟ್ಟಿನಿಂದಾಗಿ ದೇಶಾದ್ಯಂತ ಮಾರುಕಟ್ಟೆಗಳು ಮತ್ತು ರೆಸ್ಟೋರೆಂಟ್‌ಗಳನ್ನು ರಾತ್ರಿ 8 ಗಂಟೆಯೊಳಗೆ ಬಂದ್...

ಇಸ್ಲಾಮಾಬಾದ್: ಪಾಕಿಸ್ತಾನ ಜನತೆಗೆ ಅಧಿಕ ಹಣದುಬ್ಬರ ಹಾಗೂ ಬೆಲೆ ಏರಿಕೆ ಬಿಸಿಯ ಮಧ್ಯೆ ಈಗ ಕರೆಂಟ್ ಶಾಕ್ ನೀಡಲಾಗಿದ್ದು, ವಿದ್ಯುತ್ ಬಿಕ್ಕಟ್ಟಿನಿಂದಾಗಿ ದೇಶಾದ್ಯಂತ ಮಾರುಕಟ್ಟೆಗಳು ಮತ್ತು ರೆಸ್ಟೋರೆಂಟ್‌ಗಳನ್ನು ರಾತ್ರಿ 8 ಗಂಟೆಯೊಳಗೆ ಬಂದ್ ಮಾಡಬೇಕಾಗಿದೆ ಮತ್ತು ಮದುವೆ ಹಾಲ್‌ಗಳನ್ನು ರಾತ್ರಿ 10 ಗಂಟೆ ಬಂದ್ ಮಾಡಬೇಕಾದ ಸ್ಥಿತಿ ಎದುರಾಗಿದೆ.

ರಷ್ಯಾ-ಉಕ್ರೇನ್ ಯುದ್ಧ ಮತ್ತು ಜೂನ್‌ನಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಪಾಕಿಸ್ತಾನ ತೀವ್ರ ಇಂಧನ ಸಮಸ್ಯೆ ಎದುರಿಸುತ್ತಿದೆ.

ವಿದ್ಯುತ್ ಕೊರತೆಯಿಂದಾಗಿ ದೇಶಾದ್ಯಂತ ಮಾರುಕಟ್ಟೆಗಳು, ರೆಸ್ಟೋರೆಂಟ್‌ಗಳನ್ನು ರಾತ್ರಿ 8 ಗಂಟೆಯೊಳಗೆ ಮತ್ತು  ಮದುವೆ ಹಾಲ್‌ಗಳನ್ನು ರಾತ್ರಿ 10 ಗಂಟೆ ಬಂದ್ ಮಾಡುವ ಚಿಂತನೆ ಇದೆ. ಇದನ್ನು ರಾಷ್ಟ್ರವ್ಯಾಪಿ ಜಾರಿಗೊಳಿಸುವುದಕ್ಕಾಗಿ ಫೆಡರಲ್ ಸರ್ಕಾರ ಪ್ರಾಂತ್ಯಗಳನ್ನು ಸಂಪರ್ಕಿಸುತ್ತದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಹೇಳಿದ್ದಾರೆ.

ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಪಾಕ್ ಸಚಿವರು, ಗುರುವಾರದೊಳಗೆ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಈ ನಿರ್ಬಂಧದ ಅಡಿಯಲ್ಲಿ, ಮದುವೆ ಹಾಲ್‌ಗಳ ಸಮಯವನ್ನು ರಾತ್ರಿ 10 ಗಂಟೆಗೆ ಸೀಮಿತಗೊಳಿಸಲಾಗುವುದು ಮತ್ತು ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಹಾಗೂ ಮಾರುಕಟ್ಟೆಗಳನ್ನು ರಾತ್ರಿ 8 ಗಂಟೆಗೆ ಬಂದ್ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!