ವಿದೇಶ

ದಕ್ಷಿಣ ಆಫ್ರಿಕಾದ ಸೊವೆಟೊ ನಗರದ ಬಾರ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ, 14 ಮಂದಿ ಸಾವು

Lingaraj Badiger

ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಸೊವೆಟೊ ನಗರದಲ್ಲಿ ಭಾನುವಾರ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 14 ಜನ ಸಾವನ್ನಪ್ಪಿದ್ದು, 10 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, ಉಪನಗರ ಸೊವೆಟೊದಲ್ಲಿನ ಬಾರ್‌ನಲ್ಲಿ ಮಧ್ಯರಾತ್ರಿಯ ನಂತರ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ 14 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ 10 ಮಂದಿ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಎಂದು ಇಎನ್‌ಸಿಎ ಬ್ರಾಡ್‌ಕಾಸ್ಟರ್ ವರದಿ ಮಾಡಿದೆ.

ಶನಿವಾರ ತಡರಾತ್ರಿ ಮಿನಿಬಸ್ ಟ್ಯಾಕ್ಸಿಯಲ್ಲಿ ಬಂದ ದುಷ್ಕರ್ಮಿಗಳ ಗುಂಪು, ಬಾರ್‌ನಲ್ಲಿ ಕೆಲವು ಪೋಷಕರ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸ್ ಕಮಿಷನರ್ ಇಲ್ಯಾಸ್ ಮಾವೆಲಾ ಅವರು ಇಎನ್‌ಸಿಎಗೆ ಮಾಹಿತಿ ನೀಡಿದ್ದು, “ಹೌದು, ಘಟನೆ ಸಂಭವಿಸಿದೆ. ಇದು ಇಂದು ಬೆಳಗಿನ ಜಾವ 12:30ರ (ಸ್ಥಳೀಯ ಕಾಲಮಾನ) ಸುಮಾರಿಗೆ ಸಂಭವಿಸಿದೆ”. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

SCROLL FOR NEXT