ರಾಜಪಕ್ಸ 
ವಿದೇಶ

ಶ್ರೀಲಂಕಾ ಅಧ್ಯಕ್ಷ ಗೋಟಬಯಾ ರಾಜಪಕ್ಸ ಕುಟುಂಬ ಸಮೇತ ಮಾಲ್ಡೀವ್ಸ್ ಗೆ ಪರಾರಿ!

ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ತುತ್ತಾಗಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ಕುಟುಂಬ ಸಮೇತ ದೇಶ ಬಿಟ್ಟು ಮಾಲ್ಡೀವ್ಸ್‌ಗೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕೊಲಂಬೊ: ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ತುತ್ತಾಗಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ಕುಟುಂಬ ಸಮೇತ ದೇಶ ಬಿಟ್ಟು ಮಾಲ್ಡೀವ್ಸ್‌ಗೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಎಎಫ್‌ಪಿ (ಎಪಿ) ಸುದ್ದಿಸಂಸ್ಥೆ ವರದಿ ಮಾಡಿದ್ದು, ಶ್ರೀಲಂಕಾ ಅಧ್ಯಕ್ಷ ರಾಜಪಕ್ಸ ಅವರು ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಶ್ರೀಲಂಕಾ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್‌ನ ರಾಜಧಾನಿ ಮಾಲೆಗೆ ಹೊರಟಿದ್ದಾರೆ ಎಂದು ವರದಿ ಮಾಡಿವೆ.

ರಾಜಪಕ್ಸ ದೇಶವನ್ನು ತೊರೆದಿರುವುದನ್ನು ಸರ್ಕಾರಿ ಮೂಲಗಳು ಕೂಡ ಖಚಿತಪಡಿಸಿದ್ದು, ಈ ಬಗ್ಗೆ ಅವು ಹೆಚ್ಚಿನ ಮಾಹಿತಿ ಹಂಚಿಕೊಂಡಿಲ್ಲ. 

ಇತ್ತ ಶ್ರೀಲಂಕಾ ಅಧ್ಯಕ್ಷ ಹುದ್ದೆಗೆ ರಾಜಪಕ್ಸ ಕೂಡಲೇ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ಸಾವಿರಾರು ಪ್ರತಿಭಟನಾಕಾರರು ಪ್ರಧಾನಿಯವರ ಅಧಿಕೃತ ನಿವಾಸಗಳಿಗೆ ಮುತ್ತಿಗೆ ಹಾಕಿದ್ದಾರೆ. ಇದೀಗ ಜನರ ಆಕ್ರೋಶಕ್ಕೆ ಕೊನೆಗೂ ಮಣಿದಿರುವ ರಾಜಪಕ್ಸ, ಜುಲೈ 13ರಂದು ರಾಜೀನಾಮೆ ನೀಡಲಿದ್ದಾರೆ ಎಂದು ಸ್ಪೀಕರ್ ಮಹಿಂದಾ ಯಪಾ ಅಬೆವರ್ಧನ ತಿಳಿಸಿದ್ದರು. ಆದರೆ ಅದಕ್ಕೂ ಮೊದಲೇ ರಾಜಪಕ್ಸ ದೇಶ ತೊರೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಶ್ರೀಲಂಕಾದ ಸಂಸತ್, ಜುಲೈ 20ರಂದು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಿದೆ. ಈಗಾಗಲೇ ಈ ಕುರಿತ ಸಿದ್ಧತೆಗಳು ಆರಂಭವಾಗಿದೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT