ವಿದೇಶ

ಕಾಬೂಲ್ ಗುರುದ್ವಾರದಲ್ಲಿ ಸ್ಫೋಟ: ಪರಿಸ್ಥಿತಿ ಸೂಕ್ಷ್ಮದಿಂದ ಗಮನಿಸಲಾಗುತ್ತಿದೆ- ಭಾರತ

Manjula VN

ನವದೆಹಲಿ: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಗುರುದ್ವಾರದಲ್ಲಿ ಶನಿವಾರ ಬೆಳಗ್ಗೆ ಸ್ಫೋಟಗಳು ಸಂಭವಿಸಿದ್ದು, ದಾಳಿ ಸಂಬಂಧ ಭಾರತ ಕಳವಳ ವ್ಯಕ್ತಪಡಿಸಿದೆ ಮತ್ತು ಪರಿಸ್ಥಿತಿಯನ್ನೂ ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿದೆ.

ಮತ್ತು ಗುಂಡಿನ ದಾಳಿಗಳ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಹೇಳಿಕೆ ನೀಡಿದ್ದು, ಕಾಬೂಲ್‌ನಲ್ಲಿರುವ ಪವಿತ್ರ ಗುರುದ್ವಾರದ ಮೇಲಿನ ದಾಳಿಗೆ ತೀವ್ರ ಕಳವಳಗೊಂಡಿದ್ದೇವೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದ್ದು, ಬೆಳವಣಿಗೆಗಳ ಕುರಿತು ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ಹೇಳಿದ್ದಾರೆ.

ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಇಂದು ಬೆಳಿಗ್ಗೆ ಕಾಬೂಲ್‌ನ ಕಾರ್ಟೆ ಪರ್ವಾನ್ ಪ್ರದೇಶದ ಗುರುದ್ವಾರದ ಬಳಿ ಕನಿಷ್ಠ ಎರಡು ಸ್ಫೋಟಗಳು ವರದಿಯಾಗಿವೆ ಎಂದು ತಿಳಿಸಿದೆ. ಮೂಲಗಳ ಪ್ರಕಾರ, ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆಂದು ಹೇಳಲಾಗುತ್ತಿದ್ದು, ದಾಳಿಯ ಹೊಣೆಯನ್ನು ಇಲ್ಲಿಯವರೆಗೆ ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ.

SCROLL FOR NEXT