ಇರಾನ್ 
ವಿದೇಶ

ಇರಾನ್‌ನ ಇಝೆಹ್‌ನಲ್ಲಿ ಗುಂಡಿನ ದಾಳಿ: ಕನಿಷ್ಠ ಐವರ ಸಾವು, ಹಲವರಿಗೆ ಗಾಯ

ಇರಾನ್‌ನ ಇಝೆಹ್‌ನಲ್ಲಿ ಬುಧವಾರ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಸಾವಿಗೀಡಾಗಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಇರಾನ್: ಇರಾನ್‌ನ ಇಝೆಹ್‌ನಲ್ಲಿ ಬುಧವಾರ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಸಾವಿಗೀಡಾಗಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಬುಧವಾರ ಎರಡು ಮೋಟಾರ್‌ಸೈಕಲ್‌ಗಳಲ್ಲಿ ಬಂದ ಶಸ್ತ್ರಸಜ್ಜಿತ ದಾಳಿಕೋರರು ಖುಜೆಸ್ತಾನ್ ಪ್ರಾಂತ್ಯದ ಇಝೆಹ್‌ನ ಕೇಂದ್ರ ಮಾರುಕಟ್ಟೆಯಲ್ಲಿ ನಾಗರೀಕರು ಮತ್ತು ಪೊಲೀಸರು ಹಾಗೂ ಭದ್ರತಾ ಪಡೆಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ದಾಳಿಯಲ್ಲಿ ಮೂರು ಯುವಕರು, ಓರ್ವ ಬಾಲಕಿ ಹಾಗೂ ಪುರುಷರೊಬ್ಬರು ಸಾವಿಗೀಡಾಗಿದ್ದಾರೆಂದು ತಿಳಿದುಬಂದಿದೆ.

ಇನ್ನು ದಾಳಿಯಲ್ಲಿ ಗಾಯಗೊಂಡ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಖುಜೆಸ್ತಾನ್‌ನ ಭದ್ರತಾ ವ್ಯವಹಾರಗಳ ಉಪ ಗವರ್ನರ್ ವಲಿಯೊಲ್ಲಾ ಹಯಾತಿ ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆ ಪ್ರಾರಂಭಗೊಂಡಿದ್ದು ಭಯೋತ್ಪಾದಕ ದಾಳಿಯ ಹಿಂದಿರುವವರನ್ನು ಬಂಧಿಸಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!