ವಿದೇಶ

ಅಮೆರಿಕಾ: ವರ್ಜೀನಿಯಾದ ವಾಲ್‌ಮಾರ್ಟ್ ಅಂಗಡಿಯಲ್ಲಿ ಗುಂಡಿನ ದಾಳಿ, ಹಲವಾರು ಮಂದಿ ಸಾವು

Manjula VN

ವರ್ಜೀನಿಯಾ: ಅಮೆರಿಕಾದ ವರ್ಜೀನಿಯಾ ರಾಜ್ಯದ ಚೆಸಾಪೀಕ್‌ನಲ್ಲಿರುವ ವಾಲ್‌ಮಾರ್ಟ್‌ ಅಂಗಡಿಯಲ್ಲಿ ಮಂಗಳವಾರ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಹಲವು ಸಾವು-ನೋವುಗಳು ಸಂಭವಿಸಿವೆ ಎಂದು ತಿಳಿದುಬಂದಿದೆ.

ವಾಲ್‌ಮಾರ್ಟ್‌ನಲ್ಲಿನ ಮ್ಯಾನೇಜರ್ ಅನೇಕ ಉದ್ಯೋಗಿಗಳಿಗೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾನೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಹಲವರು ಸಾವನ್ನಪ್ಪಿರುವುದು ಕಂಡು ಬಂದಿತ್ತು, ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ತಿಳಿಸಿದ್ದಾರೆ.

ಘಟನೆಯಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, 10ಕ್ಕಿಂತ ಹೆಚ್ಚು ಜನರು ಸಾವನ್ನಪ್ಪಿಲ್ಲ ಎಂದು ಪೊಲೀಸ್ ವಕ್ತಾರರು ಮಾಹಿತಿ ನೀಡಿದ್ದಾರೆ.

ಈ ನಡುವೆ ಘಟನೆ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಜನರು ವಾಲ್ ಮಾರ್ಟ್ ಅಂಗಡಿಗೆ ಭೇಟಿ ನೀಡದಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

SCROLL FOR NEXT