ಸಾಂದರ್ಭಿಕ ಚಿತ್ರ 
ವಿದೇಶ

ಮೆಸಾಚುಸೆಟ್ಸ್ ನಲ್ಲಿ ರಸ್ತೆ ಅಪಘಾತ: ಮೂವರು ಭಾರತೀಯ ವಿದ್ಯಾರ್ಥಿಗಳು ಸಾವು

ಭಾರತದ ಮೂವರು ವಿದ್ಯಾರ್ಥಿಗಳು ಈ ವಾರ ಪಶ್ಚಿಮ ಮ್ಯಾಸಚೂಸೆಟ್ಸ್‌ನಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.  

ಮೆಸಾಚುಸೆಟ್ಸ್:  ಭಾರತದ ಮೂವರು ವಿದ್ಯಾರ್ಥಿಗಳು ಈ ವಾರ ಪಶ್ಚಿಮ ಮ್ಯಾಸಚೂಸೆಟ್ಸ್‌ನಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಶೆಫೀಲ್ಡ್‌ನಲ್ಲಿ ಮಂಗಳವಾರ ಬೆಳಿಗ್ಗೆ 5:30 ರ ಸುಮಾರಿಗೆ  ಎರಡು ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಾಯಗೊಂಡ ಇತರ ಐದು ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ರ್ಕ್‌ಷೈರ್ ಜಿಲ್ಲೆಯ ಅಟಾರ್ನಿ ಕಚೇರಿ ಹೇಳಿಕೆ ತಿಳಿಸಿದೆ.

ಏಳು ಜನರಿದ್ದ ಮಿನಿವ್ಯಾನ್ ಕೇವಲ ಚಾಲಕನಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಮಿನಿವ್ಯಾನ್‌ನಲ್ಲಿದ್ದ ಆರು ಜನರು ನ್ಯೂ ಹೆವನ್ ವಿಶ್ವವಿದ್ಯಾನಿಲಯಕ್ಕೆ ಮತ್ತು ಒಬ್ಬರು ಫೇರ್‌ಫೀಲ್ಡ್‌ನಲ್ಲಿರುವ ಸೇಕ್ರೆಡ್ ಹಾರ್ಟ್ ವಿಶ್ವವಿದ್ಯಾನಿಲಯದಲ್ಲಿ ಹಾಜರಾಗಿದ್ದರು ಎಂದು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.

ಮೃತ ಮೂವರನ್ನು ಪ್ರೇಮ್ ಕುಮಾರ್ ರೆಡ್ಡಿ ಗೋಡಾ,  ಪಾವನಿ ಗುಲ್ಲಪಲ್ಲಿ ಮತ್ತು ಸಾಯಿ ನರಸಿಂಹ ಪಟಂಶೆಟ್ಟಿ ಎಂದು ಗುರುತಿಸಲಾಗಿದೆ.  ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವ್ಯಾನ್ ನಲ್ಲಿದ್ದ ಇತರ ನಾಲ್ವರು ಬದುಕುಳಿದಿದ್ದಾರೆ.

ಗೋಡಾ ಸೇಕ್ರೆಡ್ ಹಾರ್ಟ್‌ನಲ್ಲಿ ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಓದುತ್ತಿದ್ದ ಎಂದು ವಿಶ್ವವಿದ್ಯಾಲಯ ದೃಢಪಡಿಸಿದೆ. "ಪ್ರೇಮ್ ಅವರ ಕುಟುಂಬಕ್ಕೆ ಸಂತಾಪವನ್ನು ವಿಶ್ವವಿದ್ಯಾನಿಲಯ ತಿಳಿಸಿದೆ.  ಟ್ರಕ್ ಚಾಲಕ 46 ವರ್ಷದ ಸ್ಥಳೀಯ ವ್ಯಕ್ತಿಯಾಗಿದ್ದು, ಅಪಘಾತದ ಕಾರಣ ಕುರಿತು ತನಿಖೆಯ ಹಂತದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT