ನಿತ್ಯಾನಂದ 
ವಿದೇಶ

'ಜೀವ ಅಪಾಯದಲ್ಲಿದೆ- ತುರ್ತು ವೈದ್ಯಕೀಯ ನೆರವು ನೀಡಿ': ಶ್ರೀಲಂಕಾ ಅಧ್ಯಕ್ಷರಿಗೆ ನಿತ್ಯಾನಂದ ಪತ್ರ

ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ ನನಗೆ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ಇದೆ ಹೀಗೆಂದು ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಕೊಲಂಬೊ: ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ ನನಗೆ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ಇದೆ ಹೀಗೆಂದು ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಅತ್ಯಾಚಾರದ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಶ್ರೀಲಂಕಾದಲ್ಲಿ ರಾಜಕೀಯ ಆಶ್ರಯ ಬಯಸುತ್ತಿದ್ದಾರೆ ಎಂದು ವರದಿಯಾಗಿದೆ. ತನ್ನ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಉಲ್ಲೇಖಿಸಿ ನಿತ್ಯಾನಂದ ಆಗಸ್ಟ್ 7ರಂದು ದ್ವೀಪ ರಾಷ್ಟ್ರದ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ತನಗೆ ವೈದ್ಯಕೀಯ ಆರೈಕೆಯ ‘ತುರ್ತು’ ಅಗತ್ಯವಿದೆ ಎಂದು ಹೇಳಿಕೊಂಡಿದ್ದಾರೆ.

ತಮ್ಮ ಜೀವ ಅಪಾಯದಲ್ಲಿದ್ದು, ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ನಿತ್ಯಾನಂದ ಶ್ರೀಲಂಕಾ ಪ್ರಧಾನಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಈ ಪತ್ರದಲ್ಲಿ ನಿತ್ಯಾನಂದ ಸ್ಥಾಪಿಸಿರುವ ದ್ವೀಪರಾಷ್ಟ್ರ ‘ಶ್ರೀಕೈಲಾಸ’ದಲ್ಲಿನ ವೈದ್ಯಕೀಯ ಮೂಲಸೌಕರ್ಯಗಳ ಕೊರತೆಯನ್ನು ಉಲ್ಲೇಖಿಸಲಾಗಿದೆ.   

ದೇಶವನ್ನೇ ತೊರೆದು ಈಕ್ವೆಡಾರ್ ದ್ವೀಪದಲ್ಲಿ ನೆಲೆಸಿರುವ ಬಿಡದಿ ಧ್ಯಾನಪೀಠದ ಸ್ವಾಮಿ ನಿತ್ಯಾನಂದನ ಆರೋಗ್ಯ ಕ್ಷೀಣಿಸುತ್ತಿದೆಯಂತೆ ಅಲ್ಲದೆ ಆ ದ್ವೀಪ ರಾಷ್ಟ್ರದಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆಯು ಇದೆಯಂತೆ ಹಾಗಾಗಿ ನನ್ನ ಜೀವಕ್ಕೆ ಅಪಾಯವಿದೆ, ತುರ್ತು ಚಿಕಿತ್ಸೆಗಾಗಿ ಕೂಡಲೇ ವೈದ್ಯಕೀಯ ಅಗತ್ಯತೆಗಳನ್ನು ಪೂರೈಸುವಂತೆ ಲಂಕಾ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಅವರಿಗೆ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್