ಶಂಕಿತ ಆರೋಪಿಗಳು 
ವಿದೇಶ

ಕೆನಡಾ: ಸರಣಿ ಚೂರಿ ಇರಿತಕ್ಕೆ 10 ಮಂದಿ ಬಲಿ; 15 ಮಂದಿಗೆ ಗಾಯ

ಕೆನಡಾದ ಸಾಸ್ಕಾಚೆವಾನ್ ಪ್ರಾಂತ್ಯದಲ್ಲಿ ಭಾನುವಾರ ನಡೆದ ಸರಣಿ ಚೂರಿ ಇರಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ,

ಒಟ್ಟಾವಾ: ಕೆನಡಾದ ಸಾಸ್ಕಾಚೆವಾನ್ ಪ್ರಾಂತ್ಯದಲ್ಲಿ ಭಾನುವಾರ ನಡೆದ ಸರಣಿ ಚೂರಿ ಇರಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಈ ಕುರಿತು ಇಬ್ಬರು ಶಂಕಿತರ ಪತ್ತೆಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.

ಸಾಸ್ಕಾಚೆವಾನ್‌ನ ರಾಜಧಾನಿ ರೆಜಿನಾ ಪ್ರಾಂತ್ಯದಲ್ಲಿ ಈ ದುರ್ಘಟನೆ ನಡೆದಿದ್ದು ಯಾವ ಕಾರಣಕ್ಕಾಗಿ ಚೂರಿ ಇರಿತ ನಡೆಸಲಾಗಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ. ಹತ್ಯೆ ನಡೆಸಿದ್ದಾರೆ ಎಂದು ಶಂಕಿಸಲಾದ ಬ್ಬರು ವ್ಯಕ್ತಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.  

ಸ್ಥಳೀಯ ಸಮುದಾಯದ ಜೇಮ್ಸ್ ಸ್ಮಿತ್ ಕ್ರೀ ನೇಷನ್ ಮತ್ತು ಹತ್ತಿರದ ಪಟ್ಟಣವಾದ ವೆಲ್ಡನ್, ಸಾಸ್ಕಾಚೆವಾನ್‌ನಲ್ಲಿ 10 ಮಂದಿ ಕೊಲೆಯಾಗಿದ್ದಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ಪಡೆಯ ಸಹಾಯಕ ಕಮಿಷನರ್ ರೋಂಡಾ ಬ್ಲ್ಯಾಕ್‌ಮೋರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಲವರು ಗಾಯಗೊಂಡಿದ್ದಾರೆ, 15 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.  ನಾವು ಇಬ್ಬರು ಶಂಕಿತರನ್ನು ಹುಡುಕುತ್ತಿದ್ದೇವೆ. ಅವರನ್ನು ಡೇಮಿಯನ್ ಮತ್ತು ಮೈಲ್ಸ್ ಸ್ಯಾಂಡರ್ಸನ್ ಎಂದು ಗುರುತಿಸಲಾಗಿದೆ.  30- ಮತ್ತು 31 ವರ್ಷ ವಯಸ್ಸಿನ ಪುರುಷರು ಎಂದು ಪೊಲೀಸ್ ಅಧಿಕಾರಿ ಹೇಳಿದರು.

2,500 ಜನಸಂಖ್ಯೆಯನ್ನು ಹೊಂದಿರುವ ಜೇಮ್ಸ್ ಸ್ಮಿತ್ ಕ್ರೀ ನೇಷನ್ ಸ್ಥಳೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿತು, ಆದರೆ ಸಾಸ್ಕಾಚೆವಾನ್ ಪ್ರಾಂತ್ಯದ ಅನೇಕ ನಿವಾಸಿಗಳು ಸ್ಥಳದಲ್ಲಿ ಆಶ್ರಯ ಪಡೆಯುವಂತೆ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್