ಸಾಂದರ್ಭಿಕ ಚಿತ್ರ 
ವಿದೇಶ

ಹೆಲಿಕಾಪ್ಟರ್ ಅಪಘಾತ: ಆರು ಪಾಕ್ ಸೇನಾಧಿಕಾರಿಗಳ ಸಾವು

ನೈರುತ್ಯ ಬಲೋಚಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಇಬ್ಬರು ಪೈಲಟ್ ಸೇರಿದಂತೆ ಪಾಕಿಸ್ತಾನದ ಆರು ಸೇನಾಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಸೇನೆ ಸೋಮವಾರ ತಿಳಿಸಿದೆ.

ಇಸ್ಲಾಮಾಬಾದ್: ನೈರುತ್ಯ ಬಲೋಚಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಇಬ್ಬರು ಪೈಲಟ್ ಸೇರಿದಂತೆ ಪಾಕಿಸ್ತಾನದ ಆರು ಸೇನಾಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಸೇನೆ ಸೋಮವಾರ ತಿಳಿಸಿದೆ. ಬಲೋಚಿಸ್ತಾನ್ ಪ್ರಾಂತ್ಯದ ಹರ್ನಾಯ್ ನಲ್ಲಿನ ಕೊಸ್ಟ್ ಬಳಿ ಭಾನುವಾರ ರಾತ್ರಿ ಹೆಲಿಕಾಪ್ಟರ್ ಹಾರಾಟ ನಡೆಸುವಾಗ ಈ ಘಟನೆ ನಡೆದಿದೆ. 

ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಸೇರಿದಂತೆ ಆರು ಮಂದಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆದರೆ, ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ. ಕಳೆದ ತಿಂಗಳು ಕೂಡಾ ಇದೇ ರೀತಿಯ ಅಪಘಾತ ನಡೆದಿತ್ತು.

ಆಗಸ್ಟ್ 1 ರಂದು ನಡೆದಿದ್ದ ಹೆಲಿಕಾಪ್ಟರ್ ಅಪಘಾತದಲ್ಲಿ ಲೆಫ್ಟಿನೆಂಟ್ ಜನರಲ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದರು. ಹವಾಮಾನ ವೈಫರೀತ್ಯ ಕಾರಣದಿಂದ ಈ ಅಪಘಾತ ಸಂಭವಿಸಿದೆ ಎಂದು ಸೇನೆ ಹೇಳಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT