ಡೊನಾಲ್ಡ್ ಟ್ರಂಪ್ 
ವಿದೇಶ

ಅಧ್ಯಕ್ಷೀಯ ಚುನಾವಣೆ: ದೋಷಾರೋಪಣೆಗೆ ಗುರಿಯಾಗಿದ್ದರೂ 24 ಗಂಟೆಗಳಲ್ಲಿ 4 ಮಿಲಿಯನ್ ಡಾಲರ್ ಸಂಗ್ರಹಿಸಿದ ಟ್ರಂಪ್

2024 ರ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿರುವ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 24 ಗಂಟೆಗಳಲ್ಲಿ, ಚುನಾವಣೆಗಾಗಿ 4 ಮಿಲಿಯನ್ ಡಾಲರ್ ಹಣವನ್ನು ಸಂಗ್ರಹಿಸಿದ್ದಾರೆ.  

ವಾಷಿಂಗ್ ಟನ್: 2024 ರ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿರುವ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 24 ಗಂಟೆಗಳಲ್ಲಿ, ಚುನಾವಣೆಗಾಗಿ 4 ಮಿಲಿಯನ್ ಡಾಲರ್ ಹಣವನ್ನು ಸಂಗ್ರಹಿಸಿದ್ದಾರೆ.  

2016ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ನೀಲಿಚಿತ್ರ ತಾರೆಯೋರ್ವಳಿಗೆ ಹಣ ಪಾವತಿಸಿದ ಆರೋಪ ಎದುರಿಸುತ್ತಿರುವ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ನ್ಯಾಯಾಲಯದಿಂದ ಕ್ರಿಮಿನಲ್‌ ಆರೋಪ ಎದುರಿಸುತ್ತಿರುವ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಗುರಿಯಾಗಿದ್ದಾರೆ.

ಮ್ಯಾನ್‌ಹಾಟನ್‌ನ ಗ್ರ್ಯಾಂಡ್‌ ಜ್ಯೂರಿ ಟ್ರಂಪ್ ವಿರುದ್ಧ ದೋಷಾರೋಪಣೆ ಸಲ್ಲಿಸಿದೆ. ಪರಿಣಾಮವಾಗಿ ತೀವ್ರ ಮುಜುಗರಕ್ಕೊಳಗಾಗಿದ್ದ ಟ್ರಂಪ್ ಇವೆಲ್ಲವನ್ನೂ ಮೀರಿ 24 ಗಂಟೆಗಳಲ್ಲಿ 4 ಮಿಲಿಯನ್ ಡಾಲರ್ ಹಣವನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಮಾಜಿ ಅಧ್ಯಕ್ಷರ ಚುನಾವಣಾ ಸ್ಪರ್ಧೆ ಅಭಿಯಾನಕ್ಕೆ ಬಂದಿರುವ ದೇಣಿಗೆಯ ಪೈಕಿ ಶೇ.25 ರಷ್ಟು ದೇಣಿಗೆ ಮೊದಲ ಬಾರಿಗೆ ದೇಣಿಗೆ ನೀಡುತ್ತಿರುವವರಿಂದ ಬಂದಿದ್ದು, ಈ ಪ್ರಮಾಣದ ದೇಣಿಗೆ ಬಂದಿರುವುದು ಟ್ರಂಪ್ ಅಧ್ಯಕ್ಷೀಯ ಸ್ಪರ್ಧೆಯ ಹಾದಿ ಸುಗಮಗೊಳಿಸುವ ಸೂಚನೆಗಳನ್ನು ನೀಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT