ರಸ್ತೆಯಲ್ಲೇ ಲಘು ವಿಮಾನ ಪತನ 
ವಿದೇಶ

ಮಲೇಷ್ಯಾ: ರಸ್ತೆಯಲ್ಲೇ ಲಘು ವಿಮಾನ ಪತನ; ಬೈಕ್ ಸವಾರ, ಕಾರು ಚಾಲಕ ಸೇರಿ 10 ಮಂದಿ ಸಾವು

ಮಲೇಷ್ಯಾದ ಸೆಂಟ್ರಲ್ ಸೆಲಂಗೊರ್ ರಾಜ್ಯದಲ್ಲಿ ಲಘು ವಿಮಾನವೊಂದು ಗುರುವಾರ ರಸ್ತೆಯಲ್ಲೇ ಪತನಗೊಂಡಿದ್ದು, ಭೀಕರ ಅಪಘಾತದಲ್ಲಿ ವಿಮಾನದಲ್ಲಿದ್ದ ಎಂಟು ಜನ ಹಾಗೂ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ...

ಕೌಲಾಲಂಪುರ್: ಮಲೇಷ್ಯಾದ ಸೆಂಟ್ರಲ್ ಸೆಲಂಗೊರ್ ರಾಜ್ಯದಲ್ಲಿ ಲಘು ವಿಮಾನವೊಂದು ಗುರುವಾರ ರಸ್ತೆಯಲ್ಲೇ ಪತನಗೊಂಡಿದ್ದು, ಭೀಕರ ಅಪಘಾತದಲ್ಲಿ ವಿಮಾನದಲ್ಲಿದ್ದ ಎಂಟು ಜನ ಹಾಗೂ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.

"ಸದ್ಯಕ್ಕೆ, ವಿಮಾನ ದುರಂತದಲ್ಲಿ ಕನಿಷ್ಠ 10 ಜನ ಸಾವನ್ನಪ್ಪಿದ್ದಾರೆಂದು ನಾನು ಹೇಳಬಲ್ಲೆ. ಇಬ್ಬರು ವಾಹನ ಚಾಲಕರು - ಕಾರಿನಲ್ಲಿದ್ದ ಒಬ್ಬರು ಮತ್ತು ಮೋಟಾರ್‌ ಸೈಕಲ್‌ನಲ್ಲಿದ್ದ ಒಬ್ಬರು ಹಾಗೂ ವಿಮಾನದಲ್ಲಿದ್ದ ಎಂಟು ಮಂದಿ ಸಹ ಸಾವನ್ನಪ್ಪಿದ್ದಾರೆ" ಎಂದು ಮೊಹಮದ್ ಇಕ್ಬಾಲ್ ಇಬ್ರಾಹಿಂ ಅವರು ಹೇಳಿದ್ದಾರೆ. 

ಕೇಂದ್ರ ಪಹಾಂಗ್ ರಾಜ್ಯದ ವಸತಿ ಮತ್ತು ಪರಿಸರ ಉಸ್ತುವಾರಿ, ರಾಜ್ಯ ಅಸೆಂಬ್ಲಿ ಸದಸ್ಯ ಜೊಹರಿ ಹರುನ್ ಅವರು ಸಹ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತನಗೊಂಡ ವಿಮಾನದಲ್ಲಿ ಆರು ಪ್ರಯಾಣಿಕರು ಮತ್ತು ಇಬ್ಬರು ವಿಮಾನ ಸಿಬ್ಬಂದಿ ಇದ್ದರು. ಆದರೆ ಯಾವುದೇ ಸಾವುನೋವುಗಳ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ಮಲೇಷ್ಯಾ ನಾಗರಿಕ ವಿಮಾನಯಾನ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ವಿಮಾನವು ಉತ್ತರದ ರೆಸಾರ್ಟ್ ದ್ವೀಪವಾದ ಲಂಕಾವಿಯಿಂದ ಹೊರಟು ರಾಜಧಾನಿ ಕೌಲಾಲಂಪುರ್‌ನ ಪಶ್ಚಿಮದಲ್ಲಿರುವ ಸುಲ್ತಾನ್ ಅಬ್ದುಲ್ ಅಜೀಜ್ ಶಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರದ ಮುಖ್ಯಸ್ಥ ನೊರಾಜ್‌ಮಾನ್ ಮಹಮೂದ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT