ಸಾಂದರ್ಭಿಕ ಚಿತ್ರ 
ವಿದೇಶ

ಮೆಕ್ಸಿಕೊ ನಗರದಲ್ಲಿ ಭಾರತೀಯ ಪ್ರಜೆಯ ಗುಂಡಿಕ್ಕಿ ಹತ್ಯೆ, ಮತ್ತೊಬ್ಬನಿಗೆ ಗಾಯ

ಉತ್ತರ ಅಮೆರಿಕಾದ ಮೆಕ್ಸಿಕೋ ನಗರದಲ್ಲಿ ಅಪರಿಚಿತ ದಾಳಿಕೋರರು ದರೋಡೆ ಮಾಡಿ ಮೆಕ್ಸಿಕೋದಲ್ಲಿ ವಾಸಿಸುತ್ತಿದ್ದ ಭಾರತೀಯ ಪ್ರಜೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು ಮತ್ತೊಬ್ಬರು ಗಾಯಗೊಂಡಿದ್ದಾರೆ. ಭಾರತೀಯ ಅಧಿಕಾರಿಗಳು ಮೆಕ್ಸಿಕನ್ ಅಧಿಕಾರಿಗಳ ಬಳಿ ಅಪರಾಧಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಮೆಕ್ಸಿಕೋ: ಉತ್ತರ ಅಮೆರಿಕಾದ ಮೆಕ್ಸಿಕೋ ನಗರದಲ್ಲಿ ಅಪರಿಚಿತ ದಾಳಿಕೋರರು ದರೋಡೆ ಮಾಡಿ ಮೆಕ್ಸಿಕೋದಲ್ಲಿ ವಾಸಿಸುತ್ತಿದ್ದ ಭಾರತೀಯ ಪ್ರಜೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು ಮತ್ತೊಬ್ಬರು ಗಾಯಗೊಂಡಿದ್ದಾರೆ. ಭಾರತೀಯ ಅಧಿಕಾರಿಗಳು ಮೆಕ್ಸಿಕನ್ ಅಧಿಕಾರಿಗಳ ಬಳಿ ಅಪರಾಧಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಈ ಘಟನೆ ಶನಿವಾರ ನಡೆದಿದ್ದು, ದಾಳಿಕೋರರು ಭಾರತೀಯ ಪ್ರಜೆಗಳಿಂದ 10,000 ಡಾಲರ್ ದರೋಡೆ ಮಾಡಿದ್ದಾರೆ, ಅವರ ಗುರುತು ಪತ್ತೆಯಾಗಿಲ್ಲ. ಮೆಕ್ಸಿಕೋ ಸಿಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಿಂದ ಹಣವನ್ನು ವಿನಿಮಯ ಮಾಡಿಕೊಂಡಿದ್ದಾರೆ ಎಂದು ಎಲ್ ಯುನಿವರ್ಸಲ್ ಪತ್ರಿಕೆ ವರದಿ ಮಾಡಿದೆ.

ಅವರಲ್ಲಿ ಒಬ್ಬರು ಗುಂಡೇಟಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೊಬ್ಬರು ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆಕ್ಸಿಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದು, ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ.

"ಅತ್ಯಂತ ವಿಷಾದನೀಯ ಮತ್ತು ಹೃದಯ ವಿದ್ರಾವಕ ಘಟನೆಯಲ್ಲಿ, ಮೆಕ್ಸಿಕೋದಲ್ಲಿ ವಾಸಿಸುತ್ತಿದ್ದ ಭಾರತೀಯ ಪ್ರಜೆಯನ್ನು ದುರಂತವಾಗಿ ಗುಂಡಿಕ್ಕಿ ಕೊಂದಿದ್ದಾರೆ. ರಾಯಭಾರ ಕಚೇರಿ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಮತ್ತು ಎಲ್ಲಾ ಬೆಂಬಲವನ್ನು ನೀಡುತ್ತಿದೆ. ನಾವು ಅಪರಾಧಿಗಳನ್ನು ಬಂಧಿಸಲು ಮೆಕ್ಸಿಕನ್ ಅಧಿಕಾರಿಗಳಿಗೆ ಒತ್ತಾಯಿಸುತ್ತಿದ್ದೇವೆ'' ಎಂದು ರಾಯಭಾರ ಕಚೇರಿ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ