ವಾಟರ್‌ಕ್ಲೂಫ್ ಏರ್ ಫೋರ್ಸ್ ಬೇಸ್‌ನಲ್ಲಿ ಪ್ರಧಾನಿ ಮೋದಿಗೆ ಸ್ವಾಗತ 
ವಿದೇಶ

15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ಮೋದಿ

15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಜೋಹಾನ್ಸ್‌ಬರ್ಗ್: 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ವಾಟರ್‌ಕ್ಲೂಫ್ ಏರ್ ಫೋರ್ಸ್ ಬೇಸ್‌ನಲ್ಲಿ ಪ್ರಧಾನಿ ಮೋದಿ ಅವರನ್ನು ದಕ್ಷಿಣ ಆಫ್ರಿಕಾದ ಉಪಾಧ್ಯಕ್ಷ ಪೌಲ್ ಮಶಾತಿಲೆ ಅವರು ಸ್ವಾಗತಿಸಿದರು.

"ದಕ್ಷಿಣ ಆಫ್ರಿಕಾದ ವಾಟರ್‌ಕ್ಲೋಫ್ ಏರ್ ಫೋರ್ಸ್ ಬೇಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲ್ಯಾಂಡ್ ಆಗಿದ್ದಾರೆ. ದಕ್ಷಿಣ ಆಫ್ರಿಕಾದ ಉಪಾಧ್ಯಕ್ಷ ಮಶಾತಿಲೆ ಅವರು ಆತ್ಮೀಯವಾಗಿ ಬರಮಾಡಿಕೊಂಡರು" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆಗಸ್ಟ್ 22 ರಿಂದ 24ರ ವರೆಗೆ ಜೋಹಾನ್ಸ್‌ಬರ್ಗ್ ನಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ನಡೆಯಲಿರುವ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ ಮತ್ತು ಈ ವೇಳೆ ಹಲವು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.

ಬ್ರಿಕ್ಸ್​ ಶೃಂಗದಲ್ಲಿ ಪಾಲ್ಗೊಳ್ಳುವುದಕ್ಕಾಗಿಯೇ ಪ್ರಧಾನಿ ಇಂದಿನಿಂದ ಮೂರು ದಿನಗಳ ಕಾಲ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದಾರೆ. ಇದರೊಂದಿಗೆ ಮೋದಿ ಅವರು, ಆಫ್ರಿಕಾಕ್ಕೆ ಮೂರನೇ ಬಾರಿ ಭೇಟಿ ನೀಡಿದಂತಾಗಿದೆ.

ಈ ಪ್ರವಾಸವು ಭಾರತ ಮತ್ತು ದಕ್ಷಿಣ ಆಫ್ರಿಕಾ ರಾಷ್ಟ್ರಗಳ ನಡುವಣ ರಾಜತಾಂತ್ರಿಕ ಸಂಬಂಧಗಳ 30ನೇ ವಾರ್ಷಿಕೋತ್ಸವದ ಪ್ರತೀಕವಾಗಿದೆ ಎಂದು ಬಣ್ಣಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT