ಪ್ರಧಾನಿ ಮೋದಿ 
ವಿದೇಶ

ವಿದೇಶ ಪ್ರವಾಸದಲ್ಲಿ ಪ್ರಧಾನಿ: ದಕ್ಷಿಣ ಆಫ್ರಿಕಾದಿಂದಲೇ ವರ್ಚುವಲ್ ಆಗಿ ಚಂದ್ರಯಾನ-3 ವೀಕ್ಷಣೆ

ಭಾರತದ ಚಂದ್ರಯಾನ-3 ಬಹುತೇಕ ಯಶಸ್ವಿಯಾಗಿodog, ಇದೀಗ ಚಂದ್ರನ ಮೇಲ್ಮೈನಲ್ಲಿ ವಿಕ್ರಮ್ ಲ್ಯಾಂಡರ್ ಉಪಗ್ರಹ ಲ್ಯಾಂಡ್ ಮಾಡಲು ಇಸ್ರೋ ಸಕಲ ಸಿದ್ಧತೆಗಳ ನಡೆಸಿದೆ. ಈ ವಿಶೇಷ ಕ್ಷಣಕ್ಕಾಗಿ ಭಾರತ ಮಾತ್ರವಲ್ಲ ವಿಶ್ವವೇ ಕಾಯುತ್ತಿದೆ.

ಜೋಹಾನ್ಸ್‌ಬರ್ಗ್: ಭಾರತದ ಚಂದ್ರಯಾನ-3 ಬಹುತೇಕ ಯಶಸ್ವಿಯಾಗಿodog, ಇದೀಗ ಚಂದ್ರನ ಮೇಲ್ಮೈನಲ್ಲಿ ವಿಕ್ರಮ್ ಲ್ಯಾಂಡರ್ ಉಪಗ್ರಹ ಲ್ಯಾಂಡ್ ಮಾಡಲು ಇಸ್ರೋ ಸಕಲ ಸಿದ್ಧತೆಗಳ ನಡೆಸಿದೆ. ಈ ವಿಶೇಷ ಕ್ಷಣಕ್ಕಾಗಿ ಭಾರತ ಮಾತ್ರವಲ್ಲ ವಿಶ್ವವೇ ಕಾಯುತ್ತಿದೆ.

ಆಗಸ್ಟ್ 23ರ ಸಂಜೆ 6.04 ಗಂಟೆಗೆ ವಿಕ್ರಮ ಲ್ಯಾಂಡರ್ ಇಳಿಸಲು ಇಸ್ರೋ ತಯಾರಿ ನಡೆಸಿದೆ. ಇಸ್ರೋ ಕಾರ್ಯಾಚರಣೆಯ ನೇರ ಪ್ರಸಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೌತ್ ಆಫ್ರಿಕಾದಿಂದ ಪಾಲ್ಗೊಳ್ಳಲಿದ್ದಾರೆ.

15ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ತಲುಪಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾದಿಂದಲೇ ಮೋದಿ ವರ್ಚುವಲ್ ಆಗಿ ಲ್ಯಾಂಡಿಂಗ್ ವೀಕ್ಷಣೆ ಮಾಡಲಿದ್ದಾರೆ.

ಚಂದ್ರನ ದಕ್ಷಿಣ ಧ್ರುವದಲ್ಲಿ ಬುಧವಾರ ಸಂಜೆ ಇಳಿಯಲಿರುವ ಚಂದ್ರಯಾನ-3 ನೌಕೆಯನ್ನು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ಟ್ರಾಕ್‌ ಕೇಂದ್ರದ ವಿಜ್ಞಾನಿಗಳು ನಿರಂತರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಆ ನೌಕೆ ನಿಗದಿಯಂತೆ ಸುಗಮವಾಗಿ ಚಲಿಸುತ್ತಿರುವುದನ್ನು ಖಾತ್ರಿಪಡಿಸಿಕೊಂಡಿದ್ದಾರೆ.

ಚಂದ್ರಯಾನ-3 ನೌಕೆಯನ್ನು ಪೀಣ್ಯದ ಇಸ್ಟ್ರಾಕ್‌ ಕೇಂದ್ರದ ಮಿಷನ್‌ ಆಪರೇಷನ್‌ ಕಾಂಪ್ಲೆಕ್ಸ್‌ನಿಂದ ನಿಗಾ ವಹಿಸಲಾಗುತ್ತಿದೆ. ಬುಧವಾರ ನೌಕೆ ಲ್ಯಾಂಡ್‌ ಆಗಲಿರುವ ಹಿನ್ನೆಲೆಯಲ್ಲಿ ಇಸ್ಟ್ರಾಕ್‌ ಕೇಂದ್ರದಲ್ಲಿ ಅತ್ಯುತ್ಸಾಹ ಹಾಗೂ ಬಿರುಸಿನ ಚಟುವಟಿಕೆಗಳು ಕಂಡುಬರುತ್ತಿವೆ.

ಈ ಕೇಂದ್ರದಲ್ಲಿನ ಚಟುವಟಿಕೆಗಳನ್ನು ಬುಧವಾರ ಸಂಜೆ 5.20ರಿಂದ ಟೀವಿಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಸಂಜೆ 6.04ಕ್ಕೆ ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್‌ ಇಳಿಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!