ವಿದೇಶ

ಪಾಕಿಸ್ತಾನ: ಪಿಪಿಪಿ ಪ್ರಧಾನಿ ಅಭ್ಯರ್ಥಿಯಾಗಿ ಬಿಲಾವಲ್, ಅಧ್ಯಕ್ಷ ಅಭ್ಯರ್ಥಿಯಾಗಿ ಜರ್ದಾರಿ ಘೋಷಣೆ

Lingaraj Badiger

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಫೆಬ್ರವರಿ 8 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಬಿಲಾವಲ್ ಭುಟ್ಟೋ ಪ್ರಧಾನಿ ಅಭ್ಯರ್ಥಿ ಮತ್ತು ಅವರ ತಂದೆ ಆಸಿಫ್ ಅಲಿ ಜರ್ದಾರಿ ಅಧ್ಯಕ್ಷೀಯ ಅಭ್ಯರ್ಥಿಯಾಗಲಿದ್ದಾರೆ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಗುರುವಾರ ಘೋಷಿಸಿದೆ.

ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಪಕ್ಷವು ತನ್ನ ಮುಖ್ಯಸ್ಥ ಮತ್ತು ಮೂರು ಬಾರಿಯ ಪ್ರಧಾನಿಯಾಗಿದ್ದ ಮಾಜಿ ನವಾಜ್ ಷರೀಫ್ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಈಗಾಗಲೇ ಘೋಷಿಸಿದ್ದರಿಂದ ಪಿಪಿಪಿ ಈ ಘೋಷಣೆ ಮಾಡಿದೆ.

ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪಿಪಿಪಿ ಮಾಹಿತಿ ಕಾರ್ಯದರ್ಶಿ ಫೈಸಲ್ ಕರೀಮ್ ಕುಂಡಿ ಅವರು, ಬಿಲಾವಲ್ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಮತ್ತು ಆಸಿಫ್ ಅಲಿ ಜರ್ದಾರಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂಬುದು ನಮ್ಮ ಆಶಯವಾಗಿದೆ" ಎಂದು ಹೇಳಿದರು.

2008 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ನಂತರ ಪಾಕಿಸ್ತಾನದ ಅಧ್ಯಕ್ಷರಾಗಿದ್ದ 68 ವರ್ಷದ ಜರ್ದಾರಿ ಅವರು 2013 ರವರೆಗೆ ಈ ಹುದ್ದೆಯಲ್ಲಿದ್ದರು.

35 ವರ್ಷದ ಬಿಲಾವಲ್ ಅವರು ಏಪ್ರಿಲ್ 2022 ರಿಂದ ಆಗಸ್ಟ್ 2023 ರವರೆಗೆ ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

SCROLL FOR NEXT