ಸಾಂದರ್ಭಿಕ ಚಿತ್ರ 
ವಿದೇಶ

ನೈಜೀರಿಯಾದಲ್ಲಿ ಜನಾಂಗೀಯ ಹಿಂಸಾಚಾರ: 100 ಕ್ಕೂ ಹೆಚ್ಚು ಮಂದಿ ಸಾವು

ನಿರಂತರ ಧಾರ್ಮಿಕ ಮತ್ತು ಜನಾಂಗೀಯ ಉದ್ವಿಗ್ನತೆ ಪೀಡಿತ ನೈಜೀರಿಯಾ ಭೀಕರ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಭಾನುವಾರ ಮಧ್ಯ ನೈಜೀರಿಯಾದಾದ್ಯಂತ ಸಶಸ್ತ್ರ ಗುಂಪುಗಳು ಪಟ್ಟಣಗಳನ್ನು ಗುರಿಯಾಗಿಸಿ ನಡೆಸಿದ ಸರಣಿ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ನೈಜೀರಿಯಾ: ನಿರಂತರ ಧಾರ್ಮಿಕ ಮತ್ತು ಜನಾಂಗೀಯ ಉದ್ವಿಗ್ನತೆ ಪೀಡಿತ ನೈಜೀರಿಯಾ ಭೀಕರ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಭಾನುವಾರ ಮಧ್ಯ ನೈಜೀರಿಯಾದಾದ್ಯಂತ ಸಶಸ್ತ್ರ ಗುಂಪುಗಳು ಪಟ್ಟಣಗಳನ್ನು ಗುರಿಯಾಗಿಸಿ ನಡೆಸಿದ ಸರಣಿ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ರೈತರು ಮತ್ತು ಕುರಿಗಾಹಿಗಳ ನಡುವೆ ನಿರಂತರ ಘರ್ಷಣೆ ನಡೆಯುತ್ತಿದೆ. ಕಳೆದ ಮೇ ತಿಂಗಳಿನಲ್ಲಿ ನಡೆದ ಹಿಂಸಾಚಾರದಲ್ಲಿ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಶನಿವಾರ ಹಾಗೂ ಭಾನುವಾರ ಸಶಸ್ತ್ರ ಗುಂಪುಗಳು ಇಲ್ಲಿನ ಕನಿಷ್ಠ 20 ಸಮುದಾಯಗಳ ಮೇಲೆ ದಾಳಿ ಮಾಡಿದೆ. ದಾಳಿಯಲ್ಲಿ 16 ಜನರು ಮೃತಪಟ್ಟಿದ್ದಾರೆ ಎಂದು ನೈಜೀರಿಯಾ ಸೇನೆಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ಸಶಸ್ತ್ರ ಗುಂಪುಗಳು ನಡೆಸಿದ ದಾಳಿಯಲ್ಲಿ ಈವರೆಗೆ ಒಟ್ಟು 113 ಜನರು ಮೃತಪಟ್ಟು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಸೋಮವಾರ ಖಚಿತಪಡಿಸಿದ್ದಾರೆ. 'ಸರ್ಕಾರ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಮುಗ್ಧ ನಾಗರಿಕರ ವಿರುದ್ಧ ನಡೆಯುತ್ತಿರುವ ದಾಳಿಯನ್ನು ನಿಲ್ಲಿಸಿ' ಎಂದು ರಾಜ್ಯ ಗವರ್ನರ್‌ನ ವಕ್ತಾರ ಗ್ಯಾಂಗ್ ಬೆರೆ ಹೇಳಿದ್ದಾರೆ.

ನೈಜೀರಿಯಾದಲ್ಲಿ ಜನಾಂಗೀಯ ಮತ್ತು ಧಾರ್ಮಿಕ ಘರ್ಷಣೆಗಳು ಹೆಚ್ಚಿವೆ. ಕೃಷಿ ಭೂಮಿ ವಿಸ್ತರಣೆ ಮುಸ್ಲಿಂ ಕುರುಬರು ಮತ್ತು ಕ್ರಿಶ್ಚಿಯನ್ ರೈತರ ನಡುವೆ ಉದ್ವಿಗ್ನತೆಗೆ ಮೂಲ ಕಾರಣವಾಗಿದೆ. ಇದರ ಪರಿಣಾಮ ಇತ್ತೀಚಿನ ವರ್ಷಗಳಲ್ಲಿ ನೂರಾರು ಜೀವಗಳು ಬಲಿಯಾಗಿವೆ ಎಂದು ಅಲ್ ಜಜೀರಾ ವರದಿ ಮಾಡಿದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ನೈಜೀರಿಯಾದ ಅಧಿಕಾರಿಗಳನ್ನು ಟೀಕಿಸಿದೆ, ಪ್ರಸ್ಥಭೂಮಿ ರಾಜ್ಯದ ಗ್ರಾಮೀಣ ಸಮುದಾಯಗಳ ಮೇಲೆ ಆಗಾಗ್ಗೆ ಮಾರಣಾಂತಿಕ ದಾಳಿಗಳನ್ನು ಕೊನೆಗೊಳಿಸಲು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

SCROLL FOR NEXT